ಮುಂಬೈ: ಪ್ರವಾದಿ ಮೊಹಮ್ಮದ್ ಪೈಗಂಬರ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ಬಿಜೆಪಿಯಿಂದ ಉಚ್ಛಾಟನೆಗೊಂಡಿರುವ ನೂಪುರ್ ಶರ್ಮಾ ವಿರುದ್ಧ ದಾಖಲಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಜೂನ್ 25 ರಂದು ವಿಚಾರಣೆ ಹಾಜರಾಗುವಂತೆ ಮುಂಬೈ ಪೊಲೀಸರು ಸಮನ್ಸ್ ಜಾರಿ ಮಾಡಿದ್ದಾರೆ.
ಟಿವಿ ಚರ್ಚೆಯೊಂದರಲ್ಲಿ ನೂಪುರ್ ಶರ್ಮಾ ಪ್ರವಾದಿ ಮೊಹಮ್ಮದ್ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ್ದರು. ಇದರ ವಿರುದ್ಧ ಮುಂಬೈನ ಪೈಧುನಿ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಈ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ಜೂನ್ 25ರಂದು ಬೆಳಗ್ಗೆ 11 ಗಂಟೆಗೆ ತನಿಖಾಧಿಕಾರಿಯ ಮುಂದೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ.