ಕರ್ನಾಟಕ

karnataka

ETV Bharat / bharat

ಮುಂಬೈನಲ್ಲಿ ಮತ್ತಿಬ್ಬರಿಗೆ ಒಮಿಕ್ರಾನ್: ಭಾರತದಲ್ಲಿ ಹೊಸ ರೂಪಾಂತರಿ ಕೇಸ್​ 23ಕ್ಕೆ ಏರಿಕೆ - ಮಹಾರಾಷ್ಟ್ರದಲ್ಲಿ ಒಮಿಕ್ರಾನ್ ಪ್ರಕರಣಗಳು

ಭಾರತದಲ್ಲಿ ಈವರೆಗೆ ಒಟ್ಟು 23 ಮಂದಿಗೆ ಒಮಿಕ್ರಾನ್ ಅಂಟಿದ್ದು, ಈ ಪೈಕಿ ಮಹಾರಾಷ್ಟ್ರದಲ್ಲೇ 10 ಕೇಸ್​ಗಳು ವರದಿಯಾಗಿವೆ.

omicron
ಒಮಿಕ್ರಾನ್

By

Published : Dec 6, 2021, 7:47 PM IST

ಮುಂಬೈ (ಮಹಾರಾಷ್ಟ್ರ): ಇಂದು ಮುಂಬೈನಲ್ಲಿ ಮತ್ತಿಬ್ಬರಿಗೆ ಒಮಿಕ್ರಾನ್ ವಕ್ಕರಿಸಿರುವುದು ದೃಢಪಟ್ಟಿದ್ದು, ಮಹಾರಾಷ್ಟ್ರದಲ್ಲಿ ಒಟ್ಟು ಒಮಿಕ್ರಾನ್ ಸೋಂಕಿತರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇವರಿಬ್ಬರಲ್ಲಿ ಒಬ್ಬರು ಅಮೆರಿಕದಿಂದ ಹಾಗೂ ಮತ್ತೊಬ್ಬರು ದಕ್ಷಿಣ ಆಫ್ರಿಕಾದಿಂದ ಬಂದಿದ್ದಾರೆ. ಇಬ್ಬರೂ ಫೈಜರ್ ಕೋವಿಡ್​​ ಲಸಿಕೆ ಪಡೆದಿದ್ದು, ಯಾವುದೇ ರೋಗ ಲಕ್ಷಣಗಳಿಲ್ಲ. ಆದರೂ ಅವರನ್ನು ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಭಾರತದ ಒಮಿಕ್ರಾನ್ ಪ್ರಕರಣಗಳು

ದಕ್ಷಿಣ ಆಫ್ರಿಕಾದಲ್ಲಿ ಮೊದಲು ಪತ್ತೆಯಾಗಿದ್ದ ಒಮಿಕ್ರಾನ್ ಬಳಿಕ 38 ರಾಷ್ಟ್ರಗಳಿಗೆ ಹರಡಿದೆ. ಡಿಸೆಂಬರ್​ 2 ರಂದು ಭಾರತದ ಮೊದಲೆರಡು ಕೇಸ್​ಗಳು ಕರ್ನಾಟಕದಲ್ಲಿ ವರದಿಯಾಗಿದ್ದವು. ಇದೀಗ ಮಹಾರಾಷ್ಟ್ರದಲ್ಲಿ 10, ರಾಜಸ್ಥಾನದಲ್ಲಿ 9, ಗುಜರಾತ್​ನಲ್ಲಿ 1 ಹಾಗೂ ದೆಹಲಿಯಲ್ಲಿ 1 ಕೇಸ್​ ಪತ್ತೆಯಾಗಿದ್ದು, ದೇಶದಲ್ಲಿ ಈವರೆಗೆ ಒಟ್ಟು 23 ಮಂದಿಗೆ ಅಂಟಿದಂತಾಗಿದೆ.

ಇದನ್ನೂ ಓದಿ: ಮನುಕುಲಕ್ಕೆ ಮುಂದೆ ಇನ್ನೂ ಮಾರಕ ವೈರಸ್​​ ಎದುರಾಗಲಿದೆ: ಲಸಿಕೆ ಕಂಡು ಹಿಡಿದ ವಿಜ್ಞಾನಿಗಳ ಎಚ್ಚರಿಕೆ

ಒಮಿಕ್ರಾನ್ ಇದು ಮರುಸೋಂಕು, ಅಂದರೆ ಕೋವಿಡ್​ನಿಂದ ಗುಣಮುಖರಾದವರಿಗೂ ಮತ್ತೆ ಅಂಟುವ ಅಪಾಯವನ್ನು ಸೂಚಿಸುತ್ತದೆ. ಬಹಳ ವೇಗವಾಗಿ ಹರಡಬಹುದು ಹಾಗೂ ಎರಡು ಬಾರಿ ಲಸಿಕೆ ಹಾಕಿಸಿಕೊಂಡವರಿಗೂ ಅಂಟಬಹುದು ಎಂದು ಹೇಳಲಾಗ್ತಿದೆ. ಇದರ ವಿರುದ್ಧ ಪ್ರಸ್ತುತ ಲಭ್ಯವಿರುವ ಲಸಿಕೆಗಳು ಪರಿಣಾಮಕಾರಿಯೇ ಎಂದು ಸಂಶೋಧನೆ ನಡೆಸಲಾಗುತ್ತಿದೆ. ಇದುವರೆಗೆ ಒಮಿಕ್ರಾನ್‌ನಿಂದ ಯಾವುದೇ ಸಾವು ವರದಿಯಾಗಿಲ್ಲ ಎಂದು ವಿಶ್ವ ಆರೋಗ್ಯ ಸಂಸ್ಥೆ ಸ್ಪಷ್ಟಪಡಿಸಿದೆ.

ABOUT THE AUTHOR

...view details