ಮುಂಬೈ:ಉದ್ಯಮಿ ಮುಖೇಶ್ ಅಂಬಾನಿ ಮನೆ ಬಳಿ ಸ್ಫೋಟಕ ತುಂಬಿದ್ದ ವಾಹನ ಪತ್ತೆ ಪ್ರಕರಣದ ತನಿಖೆ ನಡೆಯುತ್ತಿದೆ. ಈ ನಡುವೆ ಮುಂಬೈ ಪೊಲೀಸ್ ಮಖ್ಯಸ್ಥ ಪರಂ ಬಿರ್ ಸಿಂಗ್ ಅವರನ್ನು ವರ್ಗಾವಣೆ ಮಾಡಿ, ಅವರ ಸ್ಥಾನಕ್ಕೆ ಹೆಮಂತ್ ನರ್ಗಾಲೆ ಅವರನ್ನು ನೇಮಕ ಮಾಡಲಾಗಿದೆ.
ಪರಂ ಬಿರ್ ಸಿಂಗ್ ಅವರನ್ನು ಹೋಂಗಾರ್ಡ್ ದಳದ ಮುಖ್ಯಸ್ಥರಾಗಿ ವರ್ಗಾಯಿಸಲಾಗಿದೆ. ಗೃಹ ಸಚಿವ ಅನಿಲ್ ದೇಶ್ಮುಖ್ ಅವರು ಆದೇಶ ಬಂದ ತಕ್ಷಣ ಹೊಸ ಸ್ಥಳಕ್ಕೆ ಪರಂ ಬಿರ್ ಸಿಂಗ್ ತೆರಳಿದ್ದಾರೆ.
ಅಂಬಾನಿ ಮನೆ ಬಳಿ ಸ್ಪೋಟಕ ಪತ್ತೆ ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ದಳ (ಎನ್ಐಎ) ಮುಂಬೈ ಪೊಲೀಸ್ ಅಧಿಕಾರಿ ಸಚಿನ್ ವಝೆಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದೆ. ಈ ನಡುವೆ ಮಹತ್ವದ ಬೆಳವಣಿಗೆ ನಡೆದಿದೆ.