ಮುಂಬೈ (ಮಹಾರಾಷ್ಟ್ರ): ನಾಲ್ಕು ಅಂತಸ್ತಿನ ಕಟ್ಟಡದ ಒಂದು ಭಾಗ ದಿಢೀರ್ ಕುಸಿದು ಬಿದ್ದ ಪರಿಣಾಮ 61 ವರ್ಷದ ವೃದ್ಧೆ ಮೃತಪಟ್ಟಿರುವ ಘಟನೆ ಮುಂಬೈನ ಕಲ್ಬಾದೇವಿ ಪ್ರದೇಶದಲ್ಲಿ ನಿನ್ನೆ ರಾತ್ರಿ ನಡೆದಿದೆ.
ಮೃತ ವೃದ್ಧೆಯನ್ನು ಸುಂದರ ಸಾಹು ಎಂದು ಗುರುತಿಸಲಾಗಿದೆ. ಕಟ್ಟಡದ ಅವಶೇಷಗಳಡಿ ಸಿಲುಕಿದ್ದ ಅವರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆದರೆ, ಅಷ್ಟರಲ್ಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು. ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮತ್ತು ಅಗ್ನಿಶಾಮಕ ಸಿಬ್ಬಂದಿ ಕಟ್ಟಡದ ಎಲ್ಲಾ ನಿವಾಸಿಗಳನ್ನು ಸ್ಥಳಾಂತರಗೊಳಿಸಿದ್ದಾರೆ.