ಮುಂಬೈ(ಮಹಾರಾಷ್ಟ್ರ): ಮಹಿಳೆಯೊಬ್ಬರ ಮೇಲೆ ಮೂವರು ಕಾಮುಕರು ಸಾಮೂಹಿಕ ಅತ್ಯಾಚಾರ ಎಸಗಿದ್ದಲ್ಲದೇ, ಸಿಗರೇಟ್ನಿಂದ ಆಕೆಯ ಖಾಸಗಿ ಭಾಗಗಳಿಗೆ ಸುಟ್ಟು ಹಲ್ಲೆ ಮಾಡಿರುವ ಅಮಾನವೀಯ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕೇಸ್ 2012 ರಲ್ಲಿ ದೆಹಲಿಯಲ್ಲಿ ನಡೆದಿದ್ದ `ನಿರ್ಭಯಾ' ಸಾಮೂಹಿಕ ಅತ್ಯಾಚಾರ ಪ್ರಕರಣ ನೆನಪಿಸುವಂತಿದೆ.
ಮುಂಬೈ ಮಹಾನಗರ ಕುರ್ಲಾದಲ್ಲಿ ಬುಧವಾರ ಬೆಳಗ್ಗೆ ಮಹಿಳೆಯೊಬ್ಬರ ಮನೆಗೆ ನುಗ್ಗಿ ಮೂವರು ಆರೋಪಿಗಳು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ಮುಂಬೈ ಪೊಲೀಸ್ ಅಧಿಕಾರಿಯೊಬ್ಬರು ಭಾನುವಾರ ಮಾಹಿತಿ ನೀಡಿದ್ದಾರೆ.
ಆರೋಪಿಗಳು ಒಬ್ಬೊಬ್ಬರಾಗಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದು, ಅಸ್ವಾಭಾವಿಕ ಲೈಂಗಿಕ ಕ್ರಿಯೆ ನಡೆಸಿದ್ದಾರೆ. ಸಿಗರೇಟಿನಿಂದ ಸಂತ್ರಸ್ತೆಯ ಖಾಸಗಿ ಅಂಗಗಳನ್ನು ಸುಟ್ಟಿದ್ದಾರೆ. ಸಂತ್ರಸ್ತೆಯ ಎದೆ, ಎರಡೂ ಕೈಗಳ ಮೇಲೆ ಹರಿತವಾದ ಆಯುಧದಿಂದ ಈ ವೇಳೆ ಹಲ್ಲೆ ನಡೆಸಿದ್ದಾರೆ ಪಾಪಿಗಳು.