ಮುಂಬೈ:ಕಳೆದ ರಾತ್ರಿ ಹಾಗೂ ಇಂದು ಮುಂಜಾನೆ ಮುಂಬೈನಲ್ಲಿ ಭಾರಿ ಮಳೆಯಾಗುತ್ತಿದೆ. ಮಳೆಯಿಂದಾಗಿ ಮುಂಬೈನ ಹಲವಾರು ಸ್ಥಳಗಳು ಜಲಾವೃತಗೊಂಡಿವೆ. ಅದರಲ್ಲೂ ಹಿಂದ್ಮಾತಾ, ಕಿಂಗ್ ಸರ್ಕಲ್, ಸಿಯಾನ್, ಗಾಂಧಿ ಮಾರ್ಕೆಟ್ ಪ್ರದೇಶಗಳು ನೀರಿನಿಂದ ಸಂಪೂರ್ಣ ಆವೃತ್ತವಾಗಿವೆ. ಮುಂದಿನ 24 ಗಂಟೆಗಳಲ್ಲಿಯೂ ಸಾಧಾರಣದಿಂದ ಭಾರಿ ಪ್ರಮಾಣದ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮುಂಬೈನಲ್ಲಿ ಭಾರಿ ಮಳೆ: ಕೆಲವು ಪ್ರದೇಶಗಳು ಜಲಾವೃತ - ಮಹಾರಾಷ್ಟ್ರದಲ್ಲಿ ಭಾರೀ ಮಳೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ
ಮುಂಬೈ ಹಾಗೂ ಅಕ್ಕಪಕ್ಕದ ಪ್ರದೇಶಗಳಲ್ಲಿ ಮಂಗಳವಾರ ಬೆಳಗ್ಗೆ ಭಾರಿ ಮಳೆ ಸುರಿದಿದೆ. ಇದರಿಂದ ಕೆಲವು ಪ್ರದೇಶಗಳು ಜಲಾವೃತವಾಗಿವೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಕೆಲವು ಪ್ರದೇಶಗಳು ಜಲಾವೃತ
ಮುಂಜಾನೆ ಕೊಂಚ ಬಿಡುವು ನೀಡಿದ್ದ ವರುಣ, ಹನ್ನೊಂದು ಗಂಟೆಯ ನಂತರ ಮತ್ತೆ ಅಬ್ಬರಿಸಲು ಶುರು ಮಾಡಿದ್ದಾನೆ. ಹಾಗಾಗಿ ಮುಂಬೈ ಮತ್ತು ಉಪನಗರಗಳಲ್ಲಿ ಮತ್ತೆ ಮಳೆ ಆರಂಭವಾಗಿದೆ. ಮುಖ್ಯಮಂತ್ರಿ ಏಕನಾಥ್ ಶಿಂಧೆ ಮುನ್ನೆಚ್ಚರಿಕೆ ಕ್ರಮ ತೆಗೆದುಕೊಳ್ಳುವಂತೆ ಮತ್ತು ಯಾವುದೇ ಪ್ರಾಣ ಅಥವಾ ಆಸ್ತಿ ಹಾನಿಯಾಗದಂತೆ ನೋಡಿಕೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದನ್ನೂ ಓದಿ:ಪಂಜಾಬ್: ಸಚಿವರಿಗೆ ಖಾತೆಗಳನ್ನು ಹಂಚಿದ ಸಿಎಂ ಭಗವಂತ್ ಮಾನ್