ಹಾಜಿಪುರ(ಬಿಹಾರ): 2019ರಲ್ಲಿ ವೈಶಾಲಿಯಲ್ಲಿ ನಡೆದಿದ್ದ ದೇಶದ ಅತಿದೊಡ್ಡ ಚಿನ್ನಾಭರಣ ದರೋಡೆ ಪ್ರಕರಣದ ಆರೋಪಿಯಾಗಿದ್ದ ಹನಿ ರಾಜ್ ಎಂಬುವವನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ. ಭಾನುವಾರ ರಾತ್ರಿ ನಡೆದ ಗ್ಯಾಂಗ್ ವಾರ್‌ನಲ್ಲಿ ಹತ್ಯೆ ನಡೆದಿದೆ ಎಂದು ವರದಿಯಾಗಿದೆ. ಎರಡು ಬೈಕ್‌ಗಳಲ್ಲಿ ಬಂದಿದ್ದ ನಾಲ್ವರು ದುಷ್ಕರ್ಮಿಗಳು ಯೂಸುಫ್ ಅಲಿಯಾಸ್ ಹನಿ ರಾಜ್ ಮೇಲೆ ಗುಂಡು ಹಾರಿಸಿದ್ದಾರೆ. ಇದರಿಂದಾಗಿ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಇಡೀ ಪ್ರಕರಣ ಜಿಲ್ಲೆಯ ನಗರ ಪೊಲೀಸ್ ಠಾಣೆ ವ್ಯಾಪ್ತಿಯ ಆರ್‌ಎನ್ ಕಾಲೇಜು ಬಳಿ ನಡೆದಿದೆ. ಘಟನೆಯ ದೃಶ್ಯಾವಳಿಗಳು ಇಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಸದ್ಯ ಪೊಲೀಸರು ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿದ್ದು, ಸಿಸಿಟಿವಿ ದೃಶ್ಯಾವಳಿ ಆಧರಿಸಿ ಆರೋಪಿಗಳ ಪತ್ತೆಗೆ ಶೋಧ ಕಾರ್ಯ ಪ್ರಾರಂಭಿಸಿದ್ದಾರೆ. ಭಾನುವಾರ ರಾತ್ರಿ 9.45ರ ಸುಮಾರಿಗೆ ಎರಡು ಬೈಕುಗಳಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ಹನಿ ರಾಜ್ ಮೇಲೆ ಗುಂಡು ಹಾರಿಸಿದ್ದಾರೆ ಎಂದು ತಿಳಿದುಬಂದಿದೆ. ಕೃತ್ಯ ಎಸಗಿದ ಬಳಿಕ ದುಷ್ಕರ್ಮಿಗಳೆಲ್ಲ ಬೇರೆ ಬೇರೆ ಕಡೆಗೆ ಪರಾರಿಯಾಗಿದ್ದಾರೆ.
ಸ್ನೇಹಿತನ ಮನೆಯಲ್ಲಿ ವಾಸಿಸುತ್ತಿದ್ದ ಹನಿ ರಾಜ್:ಮೃತನು ಕಳೆದ ಹಲವಾರು ದಿನಗಳಿಂದ ತನ್ನ ಸ್ನೇಹಿತನ ಮನೆಯಲ್ಲಿ ವಾಸಿಸುತ್ತಿದ್ದನು ಎಂದು ಹೇಳಲಾಗುತ್ತಿದೆ. ಘಟನೆಯ ನಂತರ, ಹನಿ ರಾಜ್ ಅವರ ಸ್ನೇಹಿತ ಅವರ ಕುಟುಂಬಕ್ಕೆ ಕರೆ ಮಾಡಿ ಸದರ್ ಆಸ್ಪತ್ರೆಗೆ ಬರುವಂತೆ ಹೇಳಿದ್ದಾನೆ. ಅವರ ಕುಟುಂಬವು ಆಸ್ಪತ್ರೆಗೆ ತಲುಪಿದ ಕೂಡಲೇ ಹನಿ ರಾಜ್ನ ಸ್ನೇಹಿತ ಸ್ಥಳದಿಂದ ಪರಾರಿಯಾಗಿದ್ದಾನೆ. ನಂತರ ಘಟನೆಯ ಬಗ್ಗೆಯೂ ಪೊಲೀಸರಿಗೆ ಮಾಹಿತಿ ಬಗ್ಗೆ ನೀಡಲಾಗಿದೆ. ಘಟನೆಯ ಬಗ್ಗೆ ಮಾಹಿತಿ ಪಡೆದ ನಂತರ, ಪೊಲೀಸರು ಸ್ಥಳಕ್ಕೆ ತಲುಪಿ ಪ್ರಕರಣದ ತನಿಖೆಯನ್ನು ಪ್ರಾರಂಭಿಸಿದ್ದಾರೆ.