ಕರ್ನಾಟಕ

karnataka

ETV Bharat / bharat

ರಾಜ್ಯಪಾಲರ ಆದೇಶದ ವಿರುದ್ಧ ಸುಪ್ರೀಂ ಕದ ತಟ್ಟಿದ ಠಾಕ್ರೆ ಸರ್ಕಾರ.. ಸಂಜೆ ಅರ್ಜಿ ವಿಚಾರಣೆ - ಎಂವಿಎ ಸರ್ಕಾರದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ಆದಷ್ಟು ಬೇಗ ಬಹುಮತ ಸಾಬೀತು ಪಡಿಸುವಂತೆ ಮಹಾವಿಕಾಸ್ ಅಘಾಡಿ ಅವರಿಗೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರಿಗೆ ಪ್ರತಿಪಕ್ಷದ ನಾಯಕ ದೇವೇಂದ್ರ ಫಡ್ನವೀಸ್ ಮನವಿ ಮಾಡಿದ್ದರು. ಹೀಗಾಗಿ ರಾಜ್ಯಪಾಲರು ಬಹುಮತ ಸಾಬೀತುಪಡಿಸಲು ಮುಖ್ಯಮಂತ್ರಿಗಳಿಗೆ ಪತ್ರ ಕಳುಹಿಸಿದ್ದರು. ಈಗ ರಾಜ್ಯಪಾಲರ ಪತ್ರದ ವಿರುದ್ಧ ಸಿಎಂ ಠಾಕ್ರೆ ನೇತೃತ್ವದ ಸರ್ಕಾರ ಸುಪ್ರೀಂಕೋರ್ಟ್​ ಮೆಟ್ಟಿಲೇರಿದೆ.

MVA Government Floor Test, governor bhagat singh koshyari, MVA Govt In SC,  Congress Leader Prithviraj Chavan, Supreme Court agrees to MVA Govt pela, ಎಂವಿಎ ಸರ್ಕಾರದ ವಿಶ್ವಾಸಮತ ಯಾಚನೆ ಪರೀಕ್ಷೆ, ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ, ಸುಪ್ರೀಂನಲ್ಲಿ ಎಂವಿಎ ಸರ್ಕಾರ, ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್, ಎಂವಿಎ ಸರ್ಕಾರದ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ,
ರಾಜ್ಯಪಾಲರ ಆದೇಶದ ವಿರುದ್ಧ ಸುಪ್ರೀಂ ಕದ ತಟ್ಟಿದ ಠಾಕ್ರೆ ಸರ್ಕಾರ

By

Published : Jun 29, 2022, 12:17 PM IST

ಮುಂಬೈ (ಮಹಾರಾಷ್ಟ್ರ): ಕಳೆದೊಂದು ವಾರದಿಂದ ಮಹಾರಾಷ್ಟ್ರದಲ್ಲಿ ನಡೆಯುತ್ತಿರುವ ರಾಜಕೀಯ ಹೈಡ್ರಾಮಾ ಸುಪ್ರೀಂಕೋರ್ಟ್​​​ ಅಂಗಳ ತಲುಪಿದೆ. ಬಿಜೆಪಿಯ ಮನವಿಯನ್ನು ಅನುಸರಿಸಿ ರಾಜ್ಯಪಾಲ ಭಗತ್ ಸಿಂಗ್ ಕೊಶ್ಯಾರಿ ಅವರು ಮಹಾವಿಕಾಸ್ ಅಘಾಡಿ ಸರ್ಕಾರಕ್ಕೆ ನಾಳೆ ಬಹುಮತ ಸಾಬೀತು ಪಡಿಸುವಂತೆ ಆದೇಶಿಸಿದ್ದಾರೆ. ಇದರ ವಿರುದ್ಧ ಮಹಾವಿಕಾಸ್ ಅಘಾಡಿ ಸರ್ಕಾರವು ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದು, ಇಂದು ಸಂಜೆ 5 ಗಂಟೆಗೆ ಅರ್ಜಿ ವಿಚಾರಣೆ ನಡೆಯಲಿದೆ.

ಈ ಕುರಿತು ಮಾತನಾಡಿದ ಹಿರಿಯ ಕಾಂಗ್ರೆಸ್ ನಾಯಕ ಪೃಥ್ವಿರಾಜ್ ಚವಾಣ್, ಬಹುಮತ ಸಾಬೀತು ಪಡಿಸುವಂತೆ ರಾಜ್ಯಪಾಲ ಭಗತ್ ಸಿಂಗ್ ಕೋಶ್ಯಾರಿ ಅವರು ಮುಖ್ಯಮಂತ್ರಿ ಉದ್ಧವ್ ಠಾಕ್ರೆಗೆ ಪತ್ರ ಕಳುಹಿಸಿದ್ದಾರೆ. ಅದರಂತೆ ನಾಳೆ ವಿಶ್ವಾಸಮತ ಯಾಚನೆ ನಡೆಯಲಿದೆ. ಆದರೆ, ಇದರ ವಿರುದ್ಧ ರಾಜ್ಯ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದೆ ಎಂದು ಹೇಳಿದರು.

ಓದಿ:ರಾಜ್ಯಪಾಲರು ಸಂವಿಧಾನದ ಉಲ್ಲಂಘನೆ ಮಾಡಿದ್ದಾರೆ: ನಾವು ಕೋರ್ಟ್​​​ನಲ್ಲಿ ಪ್ರಶ್ನಿಸುತ್ತೇವೆ ಎಂದ ರಾವುತ್​

ಗುರುವಾರ ಬೆಳಗ್ಗೆ 11 ಗಂಟೆಗೆ ಶಿವಸೇನೆ ನೇತೃತ್ವದ ಸರ್ಕಾರಕ್ಕೆ ಬಹುಮತ ಸಾಬೀತುಪಡಿಸಲು ಮಹಾರಾಷ್ಟ್ರ ಶಾಸಕಾಂಗ ಕಾರ್ಯದರ್ಶಿಗೆ ರಾಜ್ಯಪಾಲ ಕೊಶ್ಯಾರಿ ಸೂಚಿಸಿದ್ದಾರೆ. ಮಾಧ್ಯಮಗಳ ಜೊತೆ ಮಾತನಾಡಿದ ಚವಾಣ್, ಜುಲೈ 11ರವರೆಗೆ ಅನರ್ಹತೆಯ ತೀರ್ಮಾನ ಕೈಗೊಳ್ಳುವಂತಿಲ್ಲ ಎಂದು ಸೂಚಿಸಿದ ಸುಪ್ರೀಂ ಕೋರ್ಟ್ ಈ ವಿಷಯದ ಯಥಾಸ್ಥಿತಿಯನ್ನು ಕಾಯ್ದುಕೊಳ್ಳಲು ತಿಳಿಸಿದೆ ಎಂದು ಸುಪ್ರೀಂ ಕೋರ್ಟ್ ನೀಡಿದ ತೀರ್ಪನ್ನು ಉಲ್ಲೇಖಿಸಿ ಮಾತನಾಡಿದರು.

ವಿಶ್ವಾಸಮತ ಯಾಚನೆಯ ರಾಜ್ಯಪಾಲರ ಪತ್ರದ ವಿರುದ್ಧ ಮಹಾವಿಕಾಸ್ ಅಘಾಡಿ ಸರ್ಕಾರ ಸುಪ್ರೀಂ ಕೋರ್ಟ್‌ಗೆ ಹೋಗಿದೆ. ಉಪಸಭಾಧ್ಯಕ್ಷ (ಅಸೆಂಬ್ಲಿ) ಶಿವಸೇನಾ ಶಾಸಕಾಂಗ ಪಕ್ಷದಲ್ಲಿನ ವಿಭಜನೆಯನ್ನು ಗುರುತಿಸಬೇಕಾಗುತ್ತದೆ. ಬಂಡಾಯಗಾರರು ಸರ್ಕಾರದ ವಿರುದ್ಧ ಮತ ಚಲಾಯಿಸಿದರೆ ಅನರ್ಹಗೊಳಿಸಲಾಗುವುದು ಎಂದು ಚವಾಣ್ ಹೇಳಿದರು.

ಓದಿ:ಬಹುಮತ ಸಾಬೀತಿಗೆ ರಾಜ್ಯಪಾಲರಿಂದ ಸಿಎಂಗೆ ಪತ್ರ.. ಇತ್ತ ಕಾಮಾಖ್ಯ ದೇವಿ ದರ್ಶನ ಪಡೆದ ಶಿಂದೆ

ರಾಜ್ಯಪಾಲರ ಪತ್ರದಿಂದ ಉಂಟಾದ ಪರಿಸ್ಥಿತಿಯನ್ನು ಚರ್ಚಿಸಲು ಎನ್‌ಸಿಪಿ ಅಧ್ಯಕ್ಷ ಶರದ್ ಪವಾರ್ ಬುಧವಾರ ಎಂವಿಎ ನಾಯಕರ ಸಭೆ ಕರೆದಿದ್ದಾರೆ. ಶಿವಸೇನೆ-ಎನ್‌ಸಿಪಿ-ಕಾಂಗ್ರೆಸ್ ಸರ್ಕಾರದ ವಿರುದ್ಧ ವಿಶ್ವಾಸಮತ ಯಾಚನೆಗಾಗಿ ಗುರುವಾರ ಮುಂಬೈಗೆ ಆಗಮಿಸುವುದಾಗಿ ಶಿವಸೇನೆ ಬಂಡಾಯ ನಾಯಕ ಏಕನಾಥ್ ಶಿಂದೆ ಬುಧವಾರ ಹೇಳಿದ್ದಾರೆ. ಇದರ ಮಧ್ಯೆ ಇಂದು ಮಧ್ಯಾಹ್ನ ಬಿಜೆಪಿ ಶಾಸಕರ ಸಭೆಯನ್ನು ದೇವೇಂದ್ರ ಫಡ್ನವೀಸ್​ ಕರೆದಿದ್ದಾರೆ.

ABOUT THE AUTHOR

...view details