ಮುಂಬೈ:ಪತ್ರಾ ಚಾಲ್ ಪುನರಾಭಿವೃದ್ಧಿ ಯೋಜನೆಗೆ ಸಂಬಂಧಿಸಿದ ಅಕ್ರಮ ಹಣ ವರ್ಗಾವಣೆ ಆರೋಪ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಶಿವಸೇನೆ ಸಂಸದ ಸಂಜಯ್ ರಾವತ್ ಅವರನ್ನು ಬಂಧಿಸಿತ್ತು. ಈ ಪ್ರಕರಣಕ್ಕೆ ಸಂಬಧಿಸಿದಂತೆ ಜೈಲು ಶಿಕ್ಷೆ ಅನುಭವಿಸಿದ ರಾವತ್ ಅವರಿಗೆ ಮುಂಬೈನ ವಿಶೇಷ ನ್ಯಾಯಾಲಯವು ಬುಧವಾರ ಜಾಮೀನು ಮಂಜೂರು ಮಾಡಿದ್ದು, ಅವರ ಬಂಧನ ಕಾನೂನುಬಾಹಿರ ಆಗಿತ್ತು ಎಂದಿದೆ.
ನನ್ನ ಬಂಧನಕ್ಕೆ ರಾಜಕೀಯ ಪಿತೂರಿ ಕಾರಣ:ಈ ಪ್ರಕರಣದಲ್ಲಿ, 100 ದಿನಗಳ ನಂತರ ಬುಧವಾರ ಮುಂಬೈನ ಆರ್ಥರ್ ರೋಡ್ ಜೈಲಿನಿಂದ ಬಿಡುಗಡೆಯಾದ ರಾವತ್ ಅವರು ಗುರುವಾರ ಮಾಧ್ಯಮದವರೊಂದಿಗೆ ಮಾತನಾಡಿ, ನನ್ನ ಬಂಧನಕ್ಕೆ ರಾಜಕೀಯ ಪಿತೂರಿ ಕಾರಣ. ಈ ರೀತಿಯ ಸೇಡಿನ ರಾಜಕೀಯವನ್ನು ನಾನು ದೇಶದಲ್ಲಿ ಕಂಡಿರಲಿಲ್ಲ. ಜೊತೆಗೆ ಶೀಘ್ರದಲ್ಲೇ ತಮ್ಮ ಪಕ್ಷದ ಮುಖ್ಯಸ್ಥ ಉದ್ಧವ್ ಠಾಕ್ರೆ ಮತ್ತು ರಾಷ್ಟ್ರೀಯವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಅಧ್ಯಕ್ಷ ಶರದ್ ಪವಾರ್ ಅವರನ್ನು ಭೇಟಿ ಮಾಡುವುದಾಗಿ ಅವರು ತಿಳಿಸಿದರು.