ವಿಜಯವಾಡ(ಆಂಧ್ರಪ್ರದೇಶ) :ಸುಪ್ರೀಂಕೋರ್ಟ್ ಮುಖ್ಯನ್ಯಾಯಮೂರ್ತಿ ಎನ್.ವಿ.ರಮಣ ತಾವು ಸಿಜೆಐ ಅಧಿಕಾರ ಸ್ವೀಕರಿಸಿಕೊಂಡ ನಂತರ ಮೊದಲ ಬಾರಿಗೆ ತಮ್ಮ ಹುಟ್ಟೂರಿಗೆ ಭೇಟಿ ನೀಡಿದ್ದಾರೆ. ಆಂಧ್ರ ಪ್ರದೇಶದ ವಿಜಯವಾಡ ಜಿಲ್ಲೆಯಲ್ಲಿರುವ ತಮ್ಮ ಹುಟ್ಟೂರಾದ ಪೊನ್ನವರಂ ಗ್ರಾಮಕ್ಕೆ ಭೇಟಿ ನೀಡಿದ ಅವರನ್ನು ಗ್ರಾಮಸ್ಥರು ಅದ್ಧೂರಿಯಾಗಿ ಸ್ವಾಗತಿಸಿದ್ದಾರೆ.
ಗ್ರಾಮಕ್ಕೆ ಬಂದ ಎನ್.ವಿ.ರಮಣ ಅವರನ್ನು ಗ್ರಾಮಸ್ಥರು ಎತ್ತಿನಗಾಡಿಯಲ್ಲಿ ಮೆರವಣಿಗೆ ಮಾಡಿದರು. ಅವರು ತೆರಳಿದ ದಾರಿಯಲ್ಲಿ ಪುಷ್ಪವೃಷ್ಟಿಯನ್ನು ಸುರಿಸಲಾಯಿತು. ಗ್ರಾಮದಲ್ಲಿನ ಶಿವ ದೇವಸ್ಥಾನಕ್ಕೆ ಭೇಟಿ ನೀಡಿದ ಮುಖ್ಯ ನ್ಯಾಯಮೂರ್ತಿಗಳು ವಿಶೇಷ ಪೂಜೆಯನ್ನೂ ಸಲ್ಲಿಸಿದರು.