ಚೆನ್ನೈ:ಇದೇ ವರ್ಷ ನಡೆಯಲಿರುವ ತಮಿಳುನಾಡು ವಿಧಾನಸಭೆಯಲ್ಲಿ ಎಐಎಡಿಎಂಕೆ ಹಾಗೂ ಬಿಜೆಪಿ ಮೈತ್ರಿಯಾಗಿ ಸ್ಪರ್ಧೆ ಮಾಡಲಿದ್ದು, ಅದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಈ ಘೋಷಣೆ ಮಾಡಿದ್ದಾರೆ.
ತಮಿಳುನಾಡಿನ ಮಧುರೈನಲ್ಲಿ ಸಾರ್ವಜನಿಕ ಸಭೆಯಲ್ಲಿ ಭಾಗಿಯಾಗಿದ್ದ ವೇಳೆ ಜೆ.ಪಿ.ನಡ್ಡಾ ಈ ಮಾಹಿತಿ ನೀಡಿದ್ದು, ಮುಂದಿನ ಮೂರು ದಿನಗಳ ಕಾಲ ತಮಿಳುನಾಡಿನ ಪುದುಚೇರಿ ಸೇರಿದಂತೆ ವಿವಿಧ ಪ್ರದೇಶಗಳಲ್ಲಿ ನಡ್ಡಾ ಸಾರ್ವಜನಿಕ ಸಭೆ ನಡೆಸಲಿದ್ದಾರೆ.