ಪುದುಚೇರಿ (ತಮಿಳುನಾಡು): ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದು, ರಾಜಕೀಯ ಚಟುವಟಿಕೆ ಗರಿಗೆದರಿದೆ. ಇಂದು ಪುದುಚೇರಿಯಲ್ಲಿ ಮಾತನಾಡಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಕೇಂದ್ರಾಡಳಿತ ಪ್ರದೇಶದಲ್ಲಿ 23 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದರು.
ಪುದುಚೇರಿಯಲ್ಲಿ 23ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುತ್ತೇವೆ: ಜೆ.ಪಿ.ನಡ್ಡಾ - ಪುದುಚೇರಿ ವಿಧಾನಸಭಾ ಚುನಾವಣೆ
ಪುದುಚೇರಿಯಲ್ಲಿ ನಿಮ್ಮೆಲ್ಲರ ಬೆಂಬಲದಿಂದ ನಾವು 23ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈ ಪ್ರದೇಶ ಭ್ರಷ್ಟಾಚಾರ ಮುಕ್ತವಾಗುತ್ತದೆ ಎಂದರು. ಕೆಲವೇ ದಿನಗಳಲ್ಲಿ ಕಮಲ ಅರಳುತ್ತದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ವಿಶ್ವಾಸ ವ್ಯಕ್ತಪಡಿಸಿದರು.
ಪುದುಚೇರಿಯಲ್ಲಿ ನಿಮ್ಮೆಲ್ಲರ ಬೆಂಬಲದಿಂದ ನಾವು 23ಕ್ಕೂ ಹೆಚ್ಚು ಸ್ಥಾನಗಳಲ್ಲಿ ಗೆಲ್ಲುತ್ತೇವೆ. ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಈ ಪ್ರದೇಶ ಭ್ರಷ್ಟಾಚಾರ ಮುಕ್ತವಾಗುತ್ತದೆ ಎಂದರು. ಕೆಲವೇ ದಿನಗಳಲ್ಲಿ ಕಮಲ ಅರಳುತ್ತದೆ ಎಂದರು. ಸಿಎಂ ವಿ.ನಾರಾಯಣ ಸ್ವಾಮಿ ಕೇಂದ್ರ ಸಚಿವರಾಗಿದ್ದಾಗ, ಅಭಿವೃದ್ಧಿ ಕೆಲಸಗಳನ್ನು ಮಾಡಲಿಲ್ಲ. ಈಗ ಅವರೇ ಇಲ್ಲಿನ ಸಿಎಂ ಆಗಿರೋದು ದುರದೃಷ್ಟಕರ ಎಂದರು.
ಶೀಘ್ರದಲ್ಲೇ ಪುದುಚೇರಿ ಚುನಾವಣೆ ಇರುವುದರಿಂದ ಜೆ.ಪಿ.ನಡ್ಡಾ ಒಂದು ದಿನದ ಪ್ರವಾಸ ಕೈಗೊಂಡಿದ್ದಾರೆ. ಕೆಲವೇ ತಿಂಗಳಲ್ಲಿ ತಮಿಳುನಾಡು ಮತ್ತು ಪುದುಚೇರಿಯಲ್ಲಿ ವಿಧಾನಸಭಾ ಚುನಾವಣೆ ನಡೆಯಲಿವೆ. ತಮಿಳುನಾಡಿನಲ್ಲಿ ಎಐಎಡಿಎಂಕೆ ಜತೆ ಬಿಜೆಪಿ ಮೈತ್ರಿ ಮಾಡಿಕೊಂಡಿದೆ.