ಮುಂಬೈ : ಮುಂಬೈನಲ್ಲಿ ಬಾಂಬ್ ಬೆದರಿಕೆ ಕರೆಗಳು ಹೆಚ್ಚಾಗುತ್ತಿದ್ದು, ಇಂದು ನಾಗ್ಪುರ ಪೊಲೀಸರಿಗೆ ಅಪರಿಚಿತನೋರ್ವ ಕರೆ ಮಾಡಿ ಮುಂಬೈನ ಪ್ರಮುಖ ವ್ಯಕ್ತಿಗಳ ಮನೆಯಲ್ಲಿ ಬಾಂಬ್ ಸ್ಫೋಟಿಸುವುದಾಗಿ ಕರೆ ಮಾಡಿದ್ದಾನೆ. ನಗರದ ಆಂಟಿಲಿಯಾದಲ್ಲಿರುವ ಉದ್ಯಮಿ ಮುಖೇಶ್ ಅಂಬಾನಿಯವರ ಬಂಗಲೆ ಸ್ಫೋಟಗೊಳ್ಳುವುದಾಗಿ ಅಪರಿಚಿತ ಹೇಳಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.
ಇದಲ್ಲದೆ ಬಾಲಿವುಡ್ ಮೆಗಾಸ್ಟಾರ್ ಅಮಿತಾಬ್ ಬಚ್ಚನ್ ಮತ್ತು ನಟ ಧರ್ಮೇಂದ್ರ ಅವರ ಮನೆ ಮೇಲೂ ದಾಳಿ ನಡೆಸುವುದಾಗಿ ಅಪರಿಚಿತ ಹೇಳಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಎಚ್ಚೆತ್ತುಕೊಂಡ ಪೊಲೀಸರು ಆರೋಪಿಯ ಪತ್ತೆಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ. ಈ ಬಗ್ಗೆ ನಾಗ್ಪುರ ಪೊಲೀಸರು ಮುಂಬೈ ಪೊಲೀಸರಿಗೆ ಮಾಹಿತಿ ನೀಡಿದ್ದು, ಮುಂಬೈ ಪೊಲೀಸರು ಬಾಂಬ್ ಸ್ಕ್ವಾಡ್ನೊಂದಿಗೆ ಸ್ಥಳಕ್ಕೆ ತಲುಪಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಆರೋಪಿಯ ಪತ್ತೆ ಪೊಲೀಸರು ವಿವಿಧ ತನಿಖಾ ಸಂಸ್ಥೆಗಳೊಂದಿಗೆ ಕಾರ್ಯಾಚರಣೆ ಆರಂಭಿಸಿದ್ದಾರೆ.