ತಿರುವನಂತಪುರಂ: 'ಪ್ರಧಾನಿ ನರೇಂದ್ರ ಮೋದಿ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕೊಲೆಗಾರರು. ಆರ್ಎಸ್ಎಸ್ ಭಯೋತ್ಪಾದಕ ಸಂಘಟನೆ' ಎಂಬ ಆಕ್ಷೇಪಾರ್ಹ ಬರಹವಿದ್ದ ಕಾರೊಂದನ್ನು ಕೇರಳದ ಪೊಲೀಸರು ವಶಕ್ಕೆ ಪಡೆದುಕೊಂಡ ಘಟನೆ ನಡೆದಿದೆ.
ತಿರುವನಂತಪುರದ ಹೋಟೆಲ್ ಒಂದಕ್ಕೆ ವ್ಯಕ್ತಿಯೊಬ್ಬ ಕಾರನ್ನು ವೇಗವಾಗಿ ಚಲಾಯಿಸಿಕೊಂಡು ಬಂದಿದ್ದಾನೆ. ಅಲ್ಲದೇ ಈ ವ್ಯಕ್ತಿ ಅನುಮಾನಾಸ್ಪದವಾಗಿ ವರ್ತಿಸಿದ ಕಾರಣ ಹೋಟೆಲ್ ಸಿಬ್ಬಂದಿ ವಿಚಾರಿಸಿದ್ದಾರೆ. ಬಳಿಕ ಹೋಟೆಲ್ ಒಳಗೆ ಬಂದು ಮದ್ಯ ಕೇಳಿದ್ದಾನೆ. ಕೊಡಲು ಒಪ್ಪದ ಕಾರಣ ಸಿಬ್ಬಂದಿ ಜೊತೆ ಜಗಳವಾಡಿಕೊಂಡಿದ್ದಾನೆ.
ಈ ವೇಳೆ ಹೋಟೆಲ್ ಸಿಬ್ಬಂದಿ ಪೊಲೀಸರಿಗೆ ಕರೆ ಮಾಡಿ ವಿಷಯ ತಿಳಿಸಿದ್ದಾರೆ. ಅಷ್ಟರಲ್ಲಿ ಆ ವ್ಯಕ್ತಿ ಕಾರನ್ನು ಅಲ್ಲಿಯೇ ಬಿಟ್ಟು ಆಟೋ ಹತ್ತಿ ಪರಾರಿಯಾಗಿದ್ದಾನೆ. ಸ್ಥಳಕ್ಕೆ ಬಂದ ಪೊಲೀಸರು ಕಾರು ತಪಾಸಣೆ ನಡೆಸಿದಾಗ ಅದರಲ್ಲಿ ಹಳೆಯ ಬಟ್ಟೆಗಳು, ಕೇಬಲ್ಗಳು, ಎಲೆಕ್ಟ್ರಾನಿಕ್ ವಸ್ತುಗಳು ದೊರೆತಿವೆ.