ಅಹಮದಾಬಾದ್(ಗುಜರಾತ್):ಒಂದು ವೇಳೆ 2036 ಒಲಿಂಪಿಕ್ಸ್ ಭಾರತದಲ್ಲಿ ಆಯೋಜನೆಗೊಂಡರೆ ಗುಜರಾತ್ನ ಅಹಮದಾಬಾದ್ನಲ್ಲಿರುವ ನರೇಂದ್ರ ಮೋದಿ ಕ್ರೀಡಾಂಗಣ ಉದ್ಘಾಟನಾ ಸಮಾರಂಭ ಆಯೋಜನೆ ಮಾಡಲು ಉತ್ತಮವಾದ ಸ್ಥಳ ಎಂದು ಭಾರತೀಯ ಒಲಿಂಪಿಕ್ ಅಸೋಷಿಯೇಷನ್ ಅಧ್ಯಕ್ಷ ನರೀಂದರ್ ಬಾತ್ರಾ ಅಭಿಪ್ರಾಯಪಟ್ಟಿದ್ದಾರೆ.
ವಿಶ್ವದಲ್ಲೇ ಅತಿ ದೊಡ್ಡ ಕ್ರಿಕೆಟ್ ಮೈದಾನ ಎಂಬ ಹೆಗ್ಗಳಿಕೆಗೆ ಪಾತ್ರರಾಗಿರುವ ನರೇಂದ್ರ ಮೋದಿ ಮೈದಾನದಲ್ಲಿ ಒಟ್ಟು 1,32,000 ಜನರು ಕುಳಿತುಕೊಂಡು ಪಂದ್ಯ ವೀಕ್ಷಣೆ ಮಾಡಬಹುದಾಗಿದೆ. 2036ರ ಒಲಿಂಪಿಕ್ ಭಾರತದಲ್ಲಿ ಆಯೋಜನೆಗೊಂಡರೆ ಖಂಡಿತವಾಗಿ ಅಹಮದಾಬಾದ್‌ನ ನರೇಂದ್ರ ಮೋದಿ ಮೈದಾನದಲ್ಲಿ ಉದ್ಘಾಟನೆ ಮಾಡಬಹುದು ಎಂದು ತಿಳಿಸಿದ್ದಾರೆ. ಆದರೆ, ಈ ವೇಳೆ ಏನು ಆಗುತ್ತದೆ ಎಂಬುದು ನಮಗೆ ಗೊತ್ತಿಲ್ಲ ಎಂದು ತಿಳಿಸಿದ್ದಾರೆ.
ಅಹಮದಾಬಾದ್‌ನ ಮೊಟೆರಾ ಕ್ರೀಡಾಂಗಣದ ಹೆಸರನ್ನು ನರೇಂದ್ರ ಮೋದಿ ಕ್ರೀಡಾಂಗಣ ಎಂದು ಈಗಾಗಲೇ ಬದಲಾವಣೆ ಮಾಡಲಾಗಿದೆ. ಇಲ್ಲಿಯವರೆಗೆ, ಮೆಲ್ಬೋರ್ನ್ ಕ್ರೀಡಾಂಗಣವು ವಿಶ್ವದ ಅತಿದೊಡ್ಡ ಕ್ರಿಕೆಟ್ ಕ್ರೀಡಾಂಗಣವಾಗಿತ್ತು.