ನವದೆಹಲಿ :ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಅಕ್ರಮ ಹಣ ವರ್ಗಾವಣೆ ಆರೋಪಕ್ಕೆ ಸಂಬಂಧಿಸಿದಂತೆ ಮತ್ತೊಂದು ದಿನಾಂಕ ಕೋರಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ (ಇಡಿ) ಶುಕ್ರವಾರ ಹೊಸದಾಗಿ ಸಮನ್ಸ್ ಜಾರಿ ಮಾಡಿದೆ. ಜೂನ್ 13ರಂದು ವಿಚಾರಣೆಗೆ ಹಾಜರಾಗುವಂತೆ ಇಡಿ ಸೂಚಿಸಿದೆ.
ರಾಹುಲ್ ಗಾಂಧಿ ಪ್ರಸ್ತುತ ವಿದೇಶ ಪ್ರವಾಸದಲ್ಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಹೀಗಾಗಿ, ರಾಹುಲ್ ಇಡಿ ಮುಂದೆ ಹಾಜರಾಗಲು ಸಮಯಾವಕಾಶ ಕೋರಿದ್ದರು. ಕಾಂಗ್ರೆಸ್ ಪಕ್ಷದ ಮೂಲಗಳ ಪ್ರಕಾರ, ರಾಹುಲ್ ಗಾಂಧಿ ಅವರು ಮೇ 20 ರಿಂದ ಮೇ 23ರವರೆಗೆ ಲಂಡನ್‌ನಲ್ಲಿ ವಿವಿಧ ಸಾರ್ವಜನಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮೇ 19ರಂದು ಭಾರತದಿಂದ ಹೋಗಿದ್ದಾರೆ. ಅಂದು ಹೋದವರು ಇನ್ನೂ ಸ್ವದೇಶಕ್ಕೆ ಹಿಂತಿರುಗಿಲ್ಲ. ಜೂನ್ 5ರಂದು ರಾಹುಲ್ ದೇಶಕ್ಕೆ ಆಗಮಿಸುವ ಸಾಧ್ಯತೆಯಿದೆ.