ನವದೆಹಲಿ:ನ್ಯಾಷನಲ್ ಹೆರಾಲ್ಡ್ ಪ್ರಕರಣ ಸಂಬಂಧ ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಇಂದೂ ಕೂಡಾ ಜಾರಿ ನಿರ್ದೇಶನಾಲಯ(ಇಡಿ)ದ ಅಧಿಕಾರಿಗಳೆದುರು ವಿಚಾರಣೆಗೆ ಹಾಜರಾಗಲಿದ್ದಾರೆ. ನಿನ್ನೆ 6 ಗಂಟೆಗಳ ಸುದೀರ್ಘ ವಿಚಾರಣೆ ನಡೆದಿತ್ತು. ಜುಲೈ 21ರಂದು ಸೋನಿಯಾ ಮೊದಲ ಸುತ್ತಿನ ವಿಚಾರಣೆ ಎದುರಿಸಿದ್ದರು. ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಪುತ್ರ ರಾಹುಲ್ ಗಾಂಧಿಯೂ ಜಾರಿ ನಿರ್ದೇಶನಾಲಯದಿಂದ 5 ದಿನಗಳ ಕಾಲ ವಿಚಾರಣೆಗೆ ಒಳಪಟ್ಟಿದ್ದಾರೆ.
ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ಮತ್ತೆ ಇ.ಡಿ ಮುಂದೆ ಹಾಜರಾಗಲಿರುವ ಸೋನಿಯಾ - Etv Bharat Karnataka news
ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಇಂದು ಮತ್ತೆ ಜಾರಿ ನಿರ್ದೇಶನಾಲಯ ಅಧಿಕಾರಿಗಳ ಮುಂದೆ ವಿಚಾರಣೆಗೆ ಹಾಜರಾಗಲಿದ್ದಾರೆ.
![ನ್ಯಾಷನಲ್ ಹೆರಾಲ್ಡ್ ಪ್ರಕರಣ: ಇಂದು ಮತ್ತೆ ಇ.ಡಿ ಮುಂದೆ ಹಾಜರಾಗಲಿರುವ ಸೋನಿಯಾ Sonia Gandhi ED inquiry again Today, Sonia Gandhi ED inquiry over National herald case, Congress leader Sonia Gandhi news, ಇಂದು ಮತ್ತೆ ಸೋನಿಯಾ ಗಾಂಧಿಗೆ ಇಡಿ ವಿಚಾರಣೆ, ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಇಡಿ ವಿಚಾರಣೆ, ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಸುದ್ದಿ,](https://etvbharatimages.akamaized.net/etvbharat/prod-images/768-512-15935263-260-15935263-1658893589337.jpg)
ಇಂದು ಮತ್ತೆ ವಿಚಾರಣೆಗೆ ಹಾಜರಾಗುತ್ತಿರುವ ಕಾಂಗ್ರೆಸ್ ಅಧಿನಾಯಕಿ
ಇಡಿ ವಿಚಾರಣೆ ವಿರೋಧಿಸಿ ರಾಹುಲ್ ಗಾಂಧಿ ಹಾಗೂ ಕಾಂಗ್ರೆಸ್ ನಾಯಕರು ದೆಹಲಿಯಲ್ಲಿ ನಿನ್ನೆ ಪ್ರತಿಭಟನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ರಾಹುಲ್, ಮಲ್ಲಿಕಾರ್ಜುನ ಖರ್ಗೆ ಸೇರಿದಂತೆ 50 ಸಂಸದರನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದರು.
ಇದನ್ನೂ ಓದಿ:ಯೂತ್ ಕಾಂಗ್ರೆಸ್ ಅಧ್ಯಕ್ಷರ ತಲೆಗೂದಲು ಹಿಡಿದು ಎಳೆದಾಡಿದ ಪೊಲೀಸರು.. ವಿಡಿಯೋ