ನವದೆಹಲಿ: ನ್ಯಾಷನಲ್ ಹೆರಾಲ್ಡ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋನಿಯಾ ಗಾಂಧಿ ಒಟ್ಟು 11 ಗಂಟೆಗಳ ಕಾಲ ವಿಚಾರಣೆಗೊಳಪಟ್ಟಿದ್ದಾರೆ. ಈ ವೇಳೆ ಅವರಿಗೆ 100ಕ್ಕೂ ಅಧಿಕ ಪ್ರಶ್ನೆ ಕೇಳಲಾಗಿದೆ ಎಂದು ವರದಿಯಾಗಿದೆ. ಮೂರನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದ ಸೋನಿಯಾ ಗಾಂಧಿ ಇಂದೂ ಸಹ ಸುಮಾರು 3 ಗಂಟೆಗಳ ಕಾಲ ವಿಚಾರಣೆ ಎದುರಿಸಿದ್ದಾರೆ.
ಜುಲೈ 21ರಂದು ಮೊದಲ ಸುತ್ತಿನ ವಿಚಾರಣೆ ಎದುರಿಸಿರುವ ಸೋನಿಯಾ ಗಾಂಧಿ ನಿನ್ನೆ ಎರಡನೇ ಸುತ್ತಿನ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ, ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಲಾಗಿತ್ತು. ಅಧಿಕಾರಿಗಳು ಸುಮಾರು 55ಕ್ಕೂ ಹೆಚ್ಚಿನ ಪ್ರಶ್ನೆ ಅವರಿಗೆ ಕೇಳಲಾಗಿದೆ ಎಂದು ತಿಳಿದು ಬಂದಿತ್ತು. ಇದರ ಬೆನ್ನಲ್ಲೇ ಇಂದು ವಿಚಾರಣೆಗೆ ಹಾಜರಾಗುವಂತೆ ಅವರಿಗೆ ನೋಟಿಸ್ ನೀಡಲಾಗಿತ್ತು.