ನವದೆಹಲಿ: ಕೋವಿಡ್ ಹಾಗೂ ಶ್ವಾಸಕೋಶದ ಸೋಂಕಿನಿಂದ ಸಂಪೂರ್ಣವಾಗಿ ಗುಣಮುಖರಾಗುವವರೆಗೂ ವಿಚಾರಣೆಯನ್ನು ಮುಂದೂಡಬೇಕೆಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಜಾರಿ ನಿರ್ದೇಶನಾಲಯಕ್ಕೆ (ಇಡಿ) ಮನವಿ ಮಾಡಿದ್ದಾರೆ.
ಕೋವಿಡ್ ಸೋಂಕಿನಿಂದ ಬಳಲುತ್ತಿದ್ದ ಸೋನಿಯಾ ಜೂನ್ 12 ರಿಂದ ದೆಹಲಿಯ ಸರ್ ಗಂಗಾರಾಮ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಜೂನ್ 20 ರಂದು ಡಿಸ್ಚಾರ್ಜ್ ಆಗಿದ್ದರು. ಆದರೆ ಕೋವಿಡೋತ್ತರ ಅನಾರೋಗ್ಯ ಅವರಿಗೆ ಉಂಟಾಗಿತ್ತು. ಮೂಗಿನಿಂದ ರಕ್ತಸ್ರಾವವಾಗಿದ್ದು, ಶಸ್ತ್ರಚಿಕಿತ್ಸೆಗೂ ಒಳಗಾಗಿದ್ದರು ಎನ್ನಲಾಗಿದೆ.