ಲಖನೌ, ಉತ್ತರಪ್ರದೇಶ: 2022ರಲ್ಲಿ ನಡೆಯಲಿರುವ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ (Uttar Pradesh Assembly polls) ಎಲ್ಲಾ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸಿಕೊಳ್ಳುತ್ತಿವೆ. ಈ ಹಿನ್ನೆಲೆಯಲ್ಲಿ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಮತ್ತು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ರಾಜ್ಯದ ಹಿರಿಯ ನಾಯಕರು ಸಭೆ ನಡೆಸಿದ್ದಾರೆ.
ಉತ್ತರ ಪ್ರದೇಶದ ಬಿಜೆಪಿ ಪ್ರಧಾನ ಕಚೇರಿಯಲ್ಲಿ ಜಸಭೆ ನಡೆಸಲಾಗಿದ್ದು, ಮುಂದಿನ ವರ್ಷದ ಆರಂಭದಲ್ಲಿ ನಡೆಯಲಿರುವ ವಿಧಾನಸಭೆ ಚುನಾವಣೆಗೆ ಕಾರ್ಯತಂತ್ರ ರೂಪಿಸಲು ಪಕ್ಷದ ಹಿರಿಯ ನಾಯಕರು ಸುಮಾರು ಮೂರೂವರೆ ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದಾರೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.