ಗುರುದಾಸ್ಪುರ(ಪಂಜಾಬ್):ಪಾಕಿಸ್ತಾನದ ಕರ್ತಾರ್ಪುರ್ ಸಾಹಿಬ್(Sahib in Kartarpur) ಭೇಟಿ ನೀಡಿರುವ ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು (Navjot Singh Sidhu) ವಿವಾದಿತ ಹೇಳಿಕೆ ನೀಡಿದ್ದು, ಇದೀಗ ಅವರ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.
ನವಜೋತ್ ಸಿಂಗ್ ಸಿಧು ಪಾಕಿಸ್ತಾನದ ಕರ್ತಾರ್ಪುರ್ ಸಾಹಿಬ್ಗೆ ಭೇಟಿ ನೀಡಿರುವ ಸಂದರ್ಭದಲ್ಲಿ ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್(Pak PM Imran Khan) ತಮ್ಮ ಹಿರಿಯ ಸಹೋದರ ಎಂದು ಹೇಳಿಕೆ ನೀಡಿದ್ದು, ಇದು ವಿವಾದಕ್ಕೆ ಕಾರಣವಾಗಿದೆ. ಇದೇ ವಿಚಾರವಾಗಿ ಪಶ್ಚಿಮ ಬಂಗಾಳದ ಬಿಜೆಪಿಯ ರಾಷ್ಟ್ರೀಯ ಮಾಹಿತಿ ಮತ್ತು ತಂತ್ರಜ್ಞಾನ ಇಲಾಖೆ ಉಸ್ತುವಾರಿ ಅಮಿತ್ ಮಾಳವಿಯಾ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟ್ವಿಟ್ಟರ್ನಲ್ಲಿ ಬರೆದುಕೊಂಡಿರುವ ಮಾಳವಿಯಾ, ರಾಹುಲ್ ಗಾಂಧಿ ಅವರ ನೆಚ್ಚಿನ ನವಜೋತ್ ಸಿಂಗ್ ಸಿಧು, ಪಾಕಿಸ್ತಾನದ ಪ್ರಧಾನಿ ಇಮ್ರಾನ್ ಖಾನ್ ಅವರನ್ನ ಹಿರಿಯ ಸಹೋದರ ಎಂದು ಕರೆದಿದ್ದಾರೆ. ಈ ಹಿಂದೆ ಕೂಡ ಪಾಕ್ನ ಸೇನಾ ಮುಖ್ಯಸ್ಥ ಜನರಲ್ ಬಾಜ್ವಾ ಅವರನ್ನ ತಬ್ಬಿಕೊಂಡಿದ್ದರು. ಇಂತಹ ವ್ಯಕ್ತಿಯನ್ನ ಪಂಜಾಬ್ ಕಾಂಗ್ರೆಸ್ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಿರುವುದು ಆಶ್ಚರ್ಯ ಮೂಡಿಸಿದೆ ಎಂದಿದ್ದಾರೆ.