ನವದೆಹಲಿ: ಪಂಜಾಬ್ ಕಾಂಗ್ರೆಸ್‌ನಲ್ಲಿ ಉಂಟಾಗಿರುವ ಬಿಕ್ಕಟ್ಟಿನ ನಡುವೆ ನವಜೋತ್ ಸಿಂಗ್ ಸಿಧು ಮತ್ತೆ ಕಾಂಗ್ರೆಸ್ ಮುಖ್ಯಸ್ಥೆ ಸೋನಿಯಾ ಗಾಂಧಿ ಅವರನ್ನು ಇಂದು ಭೇಟಿ ಮಾಡಿದ್ದಾರೆ. ದೆಹಲಿಯ ಸೋನಿಯಾ ಅವರ ನಿವಾಸಕ್ಕೆ ತೆರಳಿ ಮಾತುಕತೆ ನಡೆಸಿದ್ದಾರೆ. ಈ ವೇಳೆ ರಾಹುಲ್ ಗಾಂಧಿ ಮತ್ತು ಪಂಜಾಬ್ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಹರೀಶ್ ರಾವತ್ ಉಪಸ್ಥಿತರಿದ್ದರು.
'ಒಟ್ಟಾಗಿ ಮುಂದೆ ಸಾಗಿ'
ಸಭೆ ಬಳಿಕ ಮಾತನಾಡಿರುವ ಹರೀಶ್ ರಾವತ್, ಮುಂದಿನ ವರ್ಷದ ಪಂಜಾಬ್ ವಿಧಾನಸಭಾ ಚುನಾವಣೆಯಲ್ಲಿ ಪಕ್ಷದ ಗೆಲುವಿಗೆ ಒಟ್ಟಾಗಿ ಕೆಲಸ ಮಾಡುವಂತೆ ಸಿಎಂ ಅಮರಿಂದರ್ ಸಿಂಗ್ ಮತ್ತು ಸಿಧು ಅವರಿಗೆ ನಿರ್ದೇಶಿಸಲಾಗಿದೆ ಎಂದು ಹೇಳಿದರು. ಪಂಜಾಬ್‌ನಲ್ಲಿ ಸಿಧುಗೆ ಹೆಚ್ಚಿನ ಆದ್ಯತೆ ನೀಡಿದ್ದರಿಂದ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅಸಮಾಧಾನಗೊಂಡಿದ್ದಾರೆ ಎಂಬ ವರದಿಗಳನ್ನು ಅವರು ನಿರಾಕರಿಸಿದರು.