ಅಮೃತಸರ: ಹಿಂದಿನಿಂದಲೂ ಪಂಜಾಬ್ ಸಿಎಂ ಕ್ಯಾಪ್ಟನ್ ಅಮರಿಂದರ್ ಸಿಂಗ್ ವಿರುದ್ಧ ವಾಗ್ದಾಳಿ ನಡೆಸುತ್ತಿರುವ ನವಜೋತ್ ಸಿಂಗ್ ಸಿಧು ಇದೀಗ ಮತ್ತೊಮ್ಮೆ ಆಕ್ರೋಶ ಹೊರಹಾಕಿದ್ದಾರೆ. ಪಕ್ಷದಲ್ಲಿನ ಯಾವುದೇ ಹುದ್ದೆಯ ಹಿಂದೆ ತಾವು ಬಿದ್ದಿಲ್ಲ ಎಂದು ಹೇಳಿರುವ ಅವರು, ಚುನಾವಣೆಯಲ್ಲಿ ಮಾತ್ರ ಬಳಸಿಕೊಳ್ಳಲು ನಾನು ಪ್ರದರ್ಶನದ ಬೊಂಬೆ ಅಲ್ಲ ಎಂದಿದ್ದಾರೆ.
ಖಾಸಗಿ ಸುದ್ದಿವಾಹಿನಿಯೊಂದಕ್ಕೆ ನೀಡಿರುವ ಸಂದರ್ಶನದಲ್ಲಿ ತಮ್ಮ ಆಕ್ರೋಶ ಹೊರಹಾಕಿರುವ ಸಿಧು, ಚುನಾವಣೆ ವೇಳೆ ಪ್ರಚಾರಕ್ಕೆ ಕರೆದೊಯ್ದು, ತದನಂತರ ಕಪಾಟಿನಲ್ಲಿಡಲು ನಾನು ಪ್ರದರ್ಶನದ ಬೊಂಬೆ ಅಲ್ಲ. ನೀವು ಏನು ಮಾಡುತ್ತಿದ್ದೀರಿ ಎಂದು ನೋಡುತ್ತ ಕುಳಿತುಕೊಳ್ಳುವುದು ನನ್ನ ಕೆಲಸವಲ್ಲ ಎಂದರು.