ಕರ್ನಾಟಕ

karnataka

ETV Bharat / bharat

ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಎಚ್ಚರಿಕೆ ನೀಡಿದ ನವಜೋತ್ ಸಿಂಗ್ ಸಿಧು

ಡ್ರಗ್ಸ್ ಹಾವಳಿ ಮತ್ತು ಶ್ರೀ ಗುರು ಗ್ರಂಥ ಸಾಹಿಬ್ ಹತ್ಯೆ ಪ್ರಕರಣದ ವರದಿಯನ್ನು ರಾಜ್ಯ ಸರ್ಕಾರ ಬಹಿರಂಗಗೊಳಿಸದಿದ್ದರೆ, ರಾಜ್ಯ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಹೇಳಿದ್ದಾರೆ.

Navjot Singh Sidhu threatens to go on 'hunger strike'
Navjot Singh Sidhu threatens to go on 'hunger strike'

By

Published : Nov 26, 2021, 2:12 AM IST

ಮೋಗಾ: ಡ್ರಗ್ಸ್ ಹಾವಳಿ ಮತ್ತು ಶ್ರೀ ಗುರು ಗ್ರಂಥ ಸಾಹಿಬ್ ಹತ್ಯೆಪ್ರಕರಣದ ವರದಿಯನ್ನು ರಾಜ್ಯ ಸರ್ಕಾರ ಬಹಿರಂಗಗೊಳಿಸದಿದ್ದರೆ, ರಾಜ್ಯ ಸರ್ಕಾರದ ವಿರುದ್ಧ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಪಂಜಾಬ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ನವಜೋತ್ ಸಿಂಗ್ ಸಿಧು ಸರ್ಕಾರಕ್ಕೆ ಎಚ್ಚರಿಸಿದ್ದಾರೆ.

ಕಾಂಗ್ರೆಸ್ ಕಾರ್ಯಕರ್ತರ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಮರಳು ಮತ್ತು ಮದ್ಯದ ಮಾಫಿಯಾವನ್ನು ತೊಡೆದುಹಾಕಬೇಕು. ಈ ಸಂಬಂಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳದಿದ್ದರೆ ಧ್ವನಿ ಎತ್ತುತ್ತಲೇ ಇರುತ್ತೇನೆ ಎಂದಿದ್ದಾರೆ.

ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಪಂಜಾಬ್‌ನ ಜನರನ್ನು ಮೆಚ್ಚಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ, ರಾಜ್ಯವು ಪಂಜಾಬ್‌ನವರನ್ನೇ ಮುಖ್ಯಮಂತ್ರಿಯಾಗಬೇಕೆಂದು ಬಯಸುತ್ತದೆ ಎಂದು ಟಾಂಗ್​ ನೀಡಿದ್ದಾರೆ.

ಇನ್ನು ಶ್ರೀ ಗುರು ಗ್ರಂಥ ಸಾಹಿಬ್ ಹತ್ಯಾಕಾಂಡಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡವು ಗುರ್ಮೀತ್ ರಾಮ್ ರಹೀಮ್ ಅವರನ್ನು ವಿಚಾರಣೆ ನಡೆಸಿದ ನಂತರ ಡೇರಾದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರನ್ನೂ ವಿಚಾರಣೆ ನಡೆಸಲಿದೆ. ಮೂಲಗಳ ಪ್ರಕಾರ, ವಿಶೇಷ ತನಿಖಾ ತಂಡವು ಡೇರಾಗೆ ವಿಚಾರಣೆಗಾಗಿ ನೋಟಿಸ್ ನೀಡಿದ್ದು, ಮುಂದಿನ ಕೆಲವೇ ದಿನಗಳಲ್ಲಿ ಅವರನ್ನು ವಿಚಾರಣೆಗೆ ಒಳಪಡಿಸಿ ತನಿಖೆಗೆ ಒಳಪಡಿಸಲಾಗುತ್ತದೆ ಎನ್ನಲಾಗಿದೆ.

ABOUT THE AUTHOR

...view details