ಮುಂಬೈ (ಮಹಾರಾಷ್ಟ್ರ): ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಮಹಾರಾಷ್ಟ್ರದ ಸಚಿವ, ಎನ್ಸಿಪಿ ನಾಯಕ ನವಾಬ್ ಮಲಿಕ್ರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ಮುಂಬೈನ ವಿಶೇಷ ಪಿಎಂಎಲ್ಎ ನ್ಯಾಯಾಲಯದ ಆದೇಶಿಸಿದೆ.
ಫೆ.23ರಂದು ಜಾರಿ ನಿರ್ದೇಶನಾಲಯ (ಇಡಿ)ವು ನವಾಬ್ ಮಲಿಕ್ ಅವರನ್ನು ಬಂಧಿಸಿ, ಕಸ್ಟೋಡಿಯಲ್ ವಶದಲ್ಲಿ ಇರಿಸಿಕೊಂಡಿತ್ತು. ಅಕ್ರಮ ಹಣ ಸಂದಾಯ ವಿಷಯವಾಗಿ ಭೂಗತ ಲೋಕದೊಂದಿಗೆ ಮಲಿಕ್ ಸಂಪರ್ಕ ಹೊಂದಿರುವ ಶಂಕೆ ಇದೆ. ಅಲ್ಲದೇ, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಬೇನಾಮಿ ಆಸ್ತಿಯನ್ನು ತೊಡಗಿಸಿರುವ ಮಾಹಿತಿ ಲಭ್ಯವಾಗಿದೆ ಎಂದು ಇಡಿ ಮೂಲಗಳು ಹೇಳಿವೆ.