ಮುಂಬೈ: ಮಹಾರಾಷ್ಟ್ರದ ಕ್ಯಾಬಿನೆಟ್ ಸಚಿವ, ಎನ್‌ಸಿಪಿ ನಾಯಕ ನವಾಬ್ ಮಲಿಕ್ ತಮ್ಮ ವಿರುದ್ಧ ಜಾರಿ ನಿರ್ದೇಶನಾಲಯ(ಇಡಿ) ದಾಖಲಿಸಿರುವ ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮುಂಬೈ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದು, ಅರ್ಜಿಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದಾರೆ.
ಇಡಿ ತಮ್ಮನ್ನು ಬಂಧಿಸಿರುವುದು ಅಕ್ರಮವಾಗಿದೆ. ಮುಂಬೈ ಸೆಷನ್ಸ್ ಕೋರ್ಟ್‌ನ ಪಿಎಂಎಲ್‌ಎ ನ್ಯಾಯಾಲಯವು ನ್ಯಾಯವ್ಯಾಪ್ತಿಯಿಲ್ಲದೇ ಕಸ್ಟಡಿಗೆ ನೀಡುವ ಆದೇಶ ನೀಡಿದೆ ಎಂದು ಅರ್ಜಿಯಲ್ಲಿ ಆರೋಪಿಸಿದ್ದಾರೆ. ಕೋರ್ಟ್ ಈ ವಾರವೇ ಅರ್ಜಿಯ ವಿಚಾರಣೆ ನಡೆಸುವ ಸಾಧ್ಯೆತ ಇದೆ. ದಾವೂದ್ ಇಬ್ರಾಹಿಂ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ನವಾಬ್ ಮಲಿಕ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ)ದ ಅಧಿಕಾರಿಗಳು ಫೆ.23 ರಂದು ಬಂಧಿಸಿದ್ದರು.