ಮುಂಬೈ(ಮಹಾರಾಷ್ಟ್ರ) :ಕ್ರೂಸ್ ಹಡಗಿನಲ್ಲಿ ಡ್ರಗ್ಸ್ ಪತ್ತೆ ಪ್ರಕರಣಕ್ಕೆ ಸಂಬಂಧ ಮುಂಬೈನ ಗೋರೆಗಾಂವ್ ಪ್ರದೇಶದಲ್ಲಿ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (NCB) ಎರಡನೇ ವಿದೇಶಿ ಪ್ರಜೆಯನ್ನು ಬಂಧಿಸಿದೆ.
ಬಂಧಿತನಿಂದ ಲಕ್ಷಾಂತರ ರೂಪಾಯಿ ಬೆಲೆ ಬಾಳುವ ಡ್ರಗ್ಸ್ ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿ ಬಳಿಕ ವಶಕ್ಕೆ ಪಡೆಯಲಾಗುವುದು. ಈ ಪ್ರಕರಣದ ತನಿಖೆಯಲ್ಲಿ ಈತ ಪ್ರಮುಖ ವ್ಯಕ್ತಿ ಎಂದು ಎನ್ಸಿಬಿ ಹೇಳಿದೆ.