ಮುಂಬೈ(ಮಹಾರಾಷ್ಟ್ರ):2021ರ ಅಕ್ಟೋಬರ್ ತಿಂಗಳಲ್ಲಿ ಡ್ರಗ್ಸ್ ಕೇಸ್ನಲ್ಲಿ ಸಿಲುಕಿಕೊಂಡಿದ್ದ ಬಾಲಿವುಡ್ ಬಾದ್ ಷಾ ಶಾರುಖ್ ಖಾನ್ ಪುತ್ರ ಆರ್ಯನ್ ಖಾನ್ಗೆ ಎನ್‌ಸಿಬಿ ಕ್ಲೀನ್ ಚಿಟ್ ನೀಡಿದೆ. ಸಾಕ್ಷ್ಯಾಧಾರದ ಕೊರತೆ ಹಾಗೂ ದಾಳಿ ವೇಳೆ ಆರ್ಯನ್ ಖಾನ್ ಬಳಿ ಯಾವುದೇ ಡ್ರಗ್ಸ್ ಪತ್ತೆಯಾಗದ ಕಾರಣ ಶಾರುಖ್ ಖಾನ್ ಪುತ್ರ ಆರ್ಯನ್ಗೆ ಬಿಗ್ ರಿಲೀಫ್ ಸಿಕ್ಕಿದೆ.
ಅಕ್ಟೋಬರ್ ತಿಂಗಳಲ್ಲಿ ಕ್ರೂಸ್ ಡ್ರಗ್ಸ್ ಪ್ರಕರಣದಲ್ಲಿ ಆರ್ಯನ್ ಬಂಧನವಾಗಿತ್ತು. ಅನೇಕ ವಿಚಾರಣೆ, ಸುದೀರ್ಘ ನಾಟಕೀಯ ಬೆಳವಣಿಗೆಗಳ ನಂತರ ಅಕ್ಟೋಬರ್ 28 ರಂದು ಅವರಿಗೆ ಕೋರ್ಟ್ ಜಾಮೀನು ನೀಡಿತ್ತು. ಇದಕ್ಕೂ ಮುನ್ನ ಅವರು ಬರೋಬ್ಬರಿ 28 ದಿನ ಬಂಧನದಲ್ಲಿದ್ದರು. ಮುಂಬೈನ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಶುಕ್ರವಾರ ಬರೋಬ್ಬರಿ 6 ಸಾವಿರ ಪುಟಗಳ ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದು, 14 ಮಂದಿಯನ್ನು ಆರೋಪಿಗಳನ್ನಾಗಿ ಹೆಸರಿಸಿದೆ. ಆದರೆ, ಚಾರ್ಟ್ ಶೀಟ್‌ನಲ್ಲಿ 6 ಜನರ ವಿರುದ್ಧ ಯಾವುದೇ ಸಾಕ್ಷ್ಯಾಧಾರಗಳಿಲ್ಲ ಎಂದು ಬರೆಯಲಾಗಿದೆ. ಇದರಲ್ಲಿ ಆರ್ಯನ್ ಖಾನ್ ಸಹ ಸೇರಿಕೊಂಡಿದ್ದಾರೆ.
ಆರ್ಯನ್ ಖಾನ್ ಡ್ರಗ್ಸ್ ಪ್ರಕರಣ:ಅಕ್ಟೋಬರ್ 2 ರಂದು, ಕ್ರೂಸ್ ಶಿಪ್ ಮೇಲೆ ಎನ್‌ಸಿಬಿ ದಾಳಿ ನಡೆಸಿತ್ತು. ಇದರಲ್ಲಿ ಆರ್ಯನ್ ಖಾನ್ ಸೇರಿದಂತೆ ಒಟ್ಟು 19 ಮಂದಿಯನ್ನು ಬಂಧಿಸಲಾಗಿತ್ತು. ಆರ್ಯನ್ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಡ್ರಗ್ಸ್ ವಹಿವಾಟು ನಡೆಸುತ್ತಿದ್ದಾರೆಂದು ಎನ್‌ಸಿಬಿ ಆರೋಪಿಸಿತ್ತು. ಆದರೆ, ಆರ್ಯನ್‌ನಿಂದ ಎನ್‌ಸಿಬಿಯಿಂದ ಡ್ರಗ್ಸ್ ವಶಪಡಿಸಿಕೊಂಡಿರಲಿಲ್ಲ. ಇದರ ಬೆನ್ನಲ್ಲೇ ಅಕ್ಟೋಬರ್ 30 ರಂದು ಆರ್ಯನ್ ಖಾನ್ ಜೈಲಿನಿಂದ ಹೊರಬಂದಿದ್ದರು. ಇದೀಗ ಪ್ರಕರಣದಲ್ಲಿ ಕ್ಲೀನ್ ಚಿಟ್ ನೀಡಲಾಗಿದೆ.