ಮುಂಬೈ: ಡ್ರಗ್ಸ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಜಾಮೀನು ಪಡೆದು ಹೊರ ಬಂದಿರುವ ಆರ್ಯನ್ ಖಾನ್ (Aryan Khan's bail) ವಿರುದ್ಧ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ (Narcotics Control Bureau) ಅಧಿಕಾರಿಗಳು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸುವ ಸಾಧ್ಯತೆಯಿದೆ.
ಐಷಾರಾಮಿ ಹಡಗಿನಲ್ಲಿ ಡ್ರಗ್ಸ್ ಸೇವನೆ ಮಾಡಿರುವ ಆರೋಪಕ್ಕೆ ಸಂಬಂಧಿಸಿದಂತೆ ಎನ್ಸಿಬಿಯಿಂದ ಬಂಧನಕ್ಕೊಳಗಾಗಿದ್ದ ಬಾಲಿವುಡ್ ನಟ ಶಾರುಖ್ ಖಾನ್ (Bollywood actor Shah Rukh Khan) ಪುತ್ರ ಆರ್ಯನ್ ಖಾನ್(Aryan Khan)ಗೆ ಈಗಾಗಲೇ ಜಾಮೀನು ಮಂಜೂರು ಮಾಡಲಾಗಿದೆ.
ಇದೀಗ ಜಾಮೀನಿಗೆ ಸಂಬಂಧಿಸಿದಂತೆ ಎನ್‌ಸಿಬಿ, ಆರ್ಯನ್ ಖಾನ್ ವಿರುದ್ಧ ಸುಪ್ರೀಂ ಕೋರ್ಟ್‌ಗೆ (Supreme Court) ಮೇಲ್ಮನವಿ ಸಲ್ಲಿಸುವ ಬಗ್ಗೆ ಎನ್ಸಿಬಿಯ ಕಾನೂನು ತಜ್ಞರು ಚರ್ಚೆ ನಡೆಸಿದ್ದಾರೆ.