ಮುಂಬೈ:ಐಷಾರಾಮಿ ಕ್ರೂಸ್ ಹಡಗಿನಲ್ಲಿ ನಡೆಯುತ್ತಿದ್ದ ಡ್ರಗ್ಸ್ ಪಾರ್ಟಿಯ ಮೇಲೆ ಎನ್ಸಿಬಿ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟ ಶಾರೂಖ್ ಖಾನ್ ಪುತ್ರ ಆರ್ಯನ್ ಖಾನ್ ಅವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಉನ್ನತ ಮೂಲಗಳು ಮಾಹಿತಿ ನೀಡಿವೆ.
ಈ ಪ್ರಕರಣದಲ್ಲಿ 8 ಮಂದಿಯ ಹೆಸರುಗಳನ್ನು ಎನ್ಸಿಬಿ ಬಹಿರಂಗಪಡಿಸಿದೆ. ಆರ್ಯನ್ ಖಾನ್, ಅರ್ಬಾಜ್ ಮರ್ಚೆಂಟ್, ಮುನ್ಮುನ್ ಧಮೇಚ, ನೂಪುರ್ ಸಾರಿಕಾ, ಇಸ್ಮಿತ್ ಸಿಂಗ್, ಮೋಹಕ್ ಜೈಸ್ವಾಲ್, ವಿಕ್ರಾಂತ್ ಚೋಕರ್, ಗೋಮಿತ್ ಚೋಪ್ರಾ ಎಂಬುವವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ ಎಂದು ಎನ್ಸಿಬಿಯ ಮುಂಬೈ ವಿಭಾಗದ ಸಮೀರ್ ವಾಂಖೆಡೆ ಹೇಳಿದ್ದಾರೆ ಎಂದು ಎಎನ್ಐ ವರದಿ ಮಾಡಿದೆ.
ಶನಿವಾರ ರಾತ್ರಿ ಮುಂಬೈನಿಂದ ಗೋವಾಕ್ಕೆ ತೆರಳುತ್ತಿದ್ದ ಹಡಗಿನ ಮೇಲೆ ದಾಳಿ ನಡೆಸಿದ್ದ ನಾರ್ಕೋಟಿಕ್ಸ್ ಕಂಟ್ರೋಲ್ ಬ್ಯೂರೋ ಅಧಿಕಾರಿಗಳು 8 ಗಂಟೆಗಳ ಕಾಲ ಕಾರ್ಯಾಚರಣೆ ನಡೆಸಿ, ಕೆಲವರನ್ನು ವಶಕ್ಕೆ ಪಡೆದಿದ್ದರು.
'ಎರಡು ವಾರಗಳ ಕಾರ್ಯಾಚರಣೆ'