ಮುಂಬೈ:ಮಹಾರಾಷ್ಟ್ರ ರಾಜ್ಯಪಾಲರ ವಿರುದ್ಧ ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ತೀಕ್ಷ್ಣ ವಾಗ್ದಾಳಿ ನಡೆಸಿದ್ದು, ಬಾಲಿವುಡ್ ನಟಿ ಕಂಗನಾ ರಣಾವತ್ ಭೇಟಿಗೆ ನಿಮಗೆ ಸಮಯವಿದೆ, ಆದರೆ ಪ್ರತಿಭಟನಾ ನಿರತ ರೈತರನ್ನು ಭೇಟಿ ಮಾಡಿ ಮಾತನಾಡುವಷ್ಟು ಸಮಯಾವಕಾಶ ನಿಮ್ಮಲ್ಲಿ ಇಲ್ಲ ಎಂದಿದ್ದಾರೆ.
ಕೇಂದ್ರದ ಕೃಷಿ ಕಾನೂನು ವಿರೋಧಿಸಿ ದೆಹಲಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಬೆಂಬಲಿಸಿ ಮುಂಬೈನಲ್ಲಿ ಮಾತನಾಡಿದ ಶರದ್ ಪವಾರ್, ಕಳೆದ 60 ದಿನಗಳಿಂದ ಪಂಜಾಬ್, ಹರಿಯಾಣ ಹಾಗೂ ಉತ್ತರ ಪ್ರದೇಶ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರಧಾನಿ ಇದರ ಬಗ್ಗೆ ಮಾಹಿತಿ ಪಡೆದುಕೊಂಡಿದ್ದಾರಾ? ಈ ರೈತರು ಪಾಕಿಸ್ತಾನಕ್ಕೆ ಸೇರಿದವರಾ? ಎಂದು ಎನ್ಸಿಪಿ ಮುಖ್ಯಸ್ಥ ವಾಗ್ದಾಳಿ ನಡೆಸಿದರು.