ಕರ್ನಾಟಕ

karnataka

ETV Bharat / bharat

ಉಪ ರಾಷ್ಟ್ರಪತಿ ಚುನಾವಣೆ: ಎನ್​ಡಿಎ ಅಭ್ಯರ್ಥಿಯಾಗಿ ಕ್ಯಾಪ್ಟನ್​ ಅಮರೀಂದರ್ ಸಿಂಗ್? - ಎನ್​ಡಿಎ ಅಭ್ಯರ್ಥಿಯಾಗಿ ಕ್ಯಾಪ್ಟನ್​ ಅಮರೀಂದರ್ ಸಿಂಗ್

ಪಂಜಾಬ್ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್ ಅಮರೀಂದರ್ ಸಿಂಗ್​ ಈಗಾಗಲೇ ಬಿಜೆಪಿಯಲ್ಲಿ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಮಹತ್ವದ ಸುದ್ದಿವೊಂದು ಹೊರಬಿದ್ದಿದೆ.

Captain Amarinder Singh
Captain Amarinder Singh

By

Published : Jul 2, 2022, 7:26 PM IST

ನವದೆಹಲಿ: ನೂತನ ಉಪರಾಷ್ಟ್ರಪತಿ ಆಯ್ಕೆಗೆ ಕೇಂದ್ರ ಚುನಾವಣಾ ಆಯೋಗ ಈಗಾಗಲೇ ಮುಹೂರ್ತ ನಿಗದಿ​​ ಮಾಡಿದ್ದು, ಆಗಸ್ಟ್​​ 6ರಂದು ಚುನಾವಣೆ ನಡೆಯಲಿದೆ. ಇದರ ಬೆನ್ನಲ್ಲೇ ಎನ್​ಡಿಎ ಕೂಟದ ಅಭ್ಯರ್ಥಿಯಾಗಿ ಪಂಜಾಬ್​ ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್​ ಅಮರೀಂದರ್ ಸಿಂಗ್​ ಕಣಕ್ಕಿಳಿಯುವ ಸಾಧ್ಯತೆ ದಟ್ಟವಾಗಿದೆ ಎಂದು ಹೇಳಲಾಗ್ತಿದೆ. ಇದಕ್ಕೆ ಸಂಬಂಧಿಸಿದಂತೆ ಖುದ್ದಾಗಿ ಅಮರೀಂದರ್​ ಸಿಂಗ್ ಕಚೇರಿ ಮಾಹಿತಿ ಸಹ ಹಂಚಿಕೊಂಡಿದೆ.

ಪಂಜಾಬ್​ ವಿಧಾನಸಭೆ ಚುನಾವಣೆಗೂ ಮುಂಚೆ ಕಾಂಗ್ರೆಸ್​ನಿಂದ ಹೊರಬಂದ ಪಂಜಾಬ್​ ಲೋಕ್ ಕಾಂಗ್ರೆಸ್ ನಾಯಕ ಕ್ಯಾಪ್ಟನ್​ ಅಮರೀಂದರ್ ಸಿಂಗ್, ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡು ಚುನಾವಣೆ ಎದುರಿಸಿದ್ದರು. ಆದರೆ, ಸೋಲು ಕಂಡಿರುವ ಅವರು, ಇದೀಗ ಬಿಜೆಪಿ ಜೊತೆ ಸೇರ್ಪಡೆಯಾಗುವುದಾಗಿ ಘೋಷಣೆ ಮಾಡಿದ್ದಾರೆ. ಇದರ ಬೆನ್ನಲ್ಲೇ ಈ ಸುದ್ದಿ ಹೊರಬಿದ್ದಿದೆ. ಪಂಜಾಬ್ ಲೋಕ್ ಕಾಂಗ್ರೆಸ್ ಅಧಿಕೃತವಾಗಿ ಬಿಜೆಪಿ ಜೊತೆ ವಿಲೀನವಾದ ಬಳಿಕ ಈ ಘೋಷಣೆ ಹೊರಬೀಳುವ ಸಾಧ್ಯತೆ ಇದೆ.

ಇದನ್ನೂ ಓದಿ:ನೂರಲ್ಲ, ಇನ್ನೂರಲ್ಲ ಬರೋಬ್ಬರಿ 7 ಸಾವಿರ ಸರ್ಕಾರಿ ಶಾಲೆ ಮುಚ್ಚಿಸಿದ ಪ.ಬಂಗಾಳ ಸರ್ಕಾರ.. ಕಾರಣ?

ಪ್ರಧಾನಿ ನರೇಂದ್ರ ಮೋದಿ ಹಾಗೂ ಅಮಿತ್ ಶಾ ಜೊತೆ ಕ್ಯಾಪ್ಟನ್ ಅಮರೀಂದರ್​ ಸಿಂಗ್​ ಉತ್ತಮ ಸಂಬಂಧ ಇದೆ. ಹೀಗಾಗಿ, ಅವರನ್ನ ಉಪರಾಷ್ಟ್ರತಿಯನ್ನಾಗಿ ಕಣಕ್ಕಿಳಿಸಲು ತಯಾರಿ ನಡೆದಿದೆ ಎನ್ನಲಾಗ್ತಿದೆ. ಬೆನ್ನು ನೋವಿನ ಕಾರಣ ಅಮರೀಂದರ್ ಸಿಂಗ್ ಸದ್ಯ ಲಂಡನ್​​ನಲ್ಲಿ ಶಸ್ತ್ರಚಿಕಿತ್ಸೆಗೊಳಗಾಗಿದ್ದಾರೆ. ಅವರಿಗೆ ದೂರವಾಣಿ ಕರೆ ಮಾಡಿ ಪ್ರಧಾನಿ ನರೇಂದ್ರ ಮೋದಿ ಆರೋಗ್ಯ ವಿಚಾರಿಸಿದ್ದು, ಇದೇ ವೇಳೆ ಉಪರಾಷ್ಟ್ರಪತಿ ಅಭ್ಯರ್ಥಿ ಕುರಿತಂತೆ ಮಾತುಕತೆ ಸಹ ನಡೆದಿದೆ ಎನ್ನಲಾಗ್ತಿದೆ.

ಉಪ ರಾಷ್ಟ್ರಪತಿ ವೆಂಕಯ್ಯ ನಾಯ್ಡು ಅವರ ಅಧಿಕಾರಾವಧಿ ಆಗಸ್ಟ್​​ 10ರಂದು ಅಂತ್ಯಗೊಳ್ಳಲಿದೆ. ಇದರ ಬೆನ್ನಲ್ಲೇ ಆಗಸ್ಟ್​ 6ರಂದು ಚುನಾವಣೆ ನಡೆಯಲಿದ್ದು, ನೂತನ ಉಪರಾಷ್ಟ್ರಪತಿ ಆಯ್ಕೆ ನಡೆಯಲಿದೆ. ರಾಷ್ಟ್ರಪತಿ ಚುನಾವಣೆಗೆ ಜುಲೈ 18ರಂದು ಮತದಾನ ನಡೆಯಲಿದೆ. ಜುಲೈ 21ರಂದು ಫಲಿತಾಂಶ ಬಹಿರಂಗಗೊಳ್ಳಲಿದೆ. ಎನ್​ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಅವರು ಸ್ಪರ್ಧಿಸಿದ್ದರೆ ಪ್ರತಿಪಕ್ಷಗಳ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅವರು ಕಣಕ್ಕಿಳಿದಿದ್ದಾರೆ.

ABOUT THE AUTHOR

...view details