ನವದೆಹಲಿ: ರಾಷ್ಟ್ರಪತಿ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಇಂದು ಪ್ರತಿಪಕ್ಷಗಳ ಬೆಂಬಲ ಕೋರಿದ್ದಾರೆ. ಪ್ರಮುಖ ವಿಪಕ್ಷ ನಾಯಕರಾದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‌ಸಿಪಿ ವರಿಷ್ಠ ಶರದ್ ಪವಾರ್, ಟಿಎಂಸಿ ನಾಯಕಿ ಹಾಗು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ದೂರವಾಣಿ ಕರೆ ಮಾಡಿ ಅವರು ಮಾತನಾಡಿದರು.
ಸೋನಿಯಾ, ಮಮತಾಗೆ ದೂರವಾಣಿ ಕರೆಮಾಡಿ ಬೆಂಬಲ ಕೋರಿದ ದ್ರೌಪದಿ ಮುರ್ಮು - ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ
ರಾಷ್ಟ್ರಪತಿ ಚುನಾವಣೆಗೆ ತಮ್ಮ ಅಭ್ಯರ್ಥಿಯನ್ನಾಗಿ ಯಶವಂತ್ ಸಿನ್ಹಾ ಅವರನ್ನು ಪ್ರತಿಪಕ್ಷಗಳು ಈಗಾಗಲೇ ಘೋಷಿಸಿವೆ. ಈ ನಡುವೆಯೂ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಎನ್‌ಸಿಪಿ ನಾಯಕ ಶರದ್ ಪವಾರ್, ಟಿಎಂಸಿಯ ಮಮತಾ ಬ್ಯಾನರ್ಜಿ ಅವರಿಗೆ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು ವೈಯಕ್ತಿಕವಾಗಿ ದೂರವಾಣಿ ಕರೆ ಮಾಡಿ ಬೆಂಬಲ ಕೋರಿದ್ದಾರೆ.
ಸೋನಿಯಾ, ಪವಾರ್, ಮಮತಾಗೆ ಮುರ್ಮು ದೂರವಾಣಿ ಕರೆ
ಮುರ್ಮು ಅವರು ಜುಲೈ 18ರಂದು ನಡೆಯವ ರಾಷ್ಟ್ರಪತಿ ಚುನಾವಣೆಗೆ ಇಂದು ನಾಮಪತ್ರ ಸಲ್ಲಿಸಿದ್ದಾರೆ. ಇದಕ್ಕೂ ಮುನ್ನ ಪ್ರತಿಪಕ್ಷಗಳ ಮೂವರು ಪ್ರಮುಖ ನಾಯಕರಿಗೆ ದೂರವಾಣಿ ಕರೆಮಾಡಿ, ತಮ್ಮನ್ನು ಬೆಂಬಲಿಸುವಂತೆ ಕೋರಿದರು. ಇದಕ್ಕೆ ಪ್ರತಿಯಾಗಿ ಮೂವರು ನಾಯಕರು ಕೂಡಾ ಮುರ್ಮು ಅವರಿಗೆ ಶುಭ ಕೋರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಇದನ್ನೂ ಓದಿ:ರಾಷ್ಟ್ರಪತಿ ಚುನಾವಣೆ: ಪ್ರಧಾನಿ ಮೋದಿ ಉಪಸ್ಥಿತಿಯಲ್ಲಿ ನಾಮಪತ್ರ ಸಲ್ಲಿಸಿದ ದ್ರೌಪದಿ ಮುರ್ಮು
Last Updated : Jun 24, 2022, 4:19 PM IST