ಕರ್ನಾಟಕ

karnataka

ETV Bharat / bharat

ಟೆಸ್ಟಿಂಗ್‌ ಹೆಚ್ಚಿಸಿ, ಜನರು ಆತಂಕಗೊಳ್ಳದಂತೆ ತಕ್ಷಣ ಕ್ರಮ ಕೈಗೊಳ್ಳಿ: ಸಿಎಂಗಳಿಗೆ ಮೋದಿ ಮಹತ್ವದ ಸೂಚನೆ - ಎಲ್ಲ ರಾಜ್ಯದ ಸಿಎಂಗಳೊಂದಿಗೆ ನಮೋ ಚರ್ಚೆ

ದೇಶದಲ್ಲಿ ಕೊರೊನಾ ವೈರಸ್​ ಎರಡನೇ ಅಲೆ ವಿಸ್ತರಣೆ ಆಗುವುದಕ್ಕೆ ಕಡಿವಾಣ ಹಾಕಲೇಬೇಕಾಗಿದೆ. ಈ ನಿಟ್ಟಿನಲ್ಲಿ ತ್ವರಿತವಾಗಿ ಕಠಿಣ ನಿರ್ಧಾರಗಳನ್ನು ತೆಗೆದುಕೊಳ್ಳಿ ಎಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಸೂಚನೆ ನೀಡಿದರು.

PM Modi meet
PM Modi meet

By

Published : Mar 17, 2021, 3:47 PM IST

ನವದೆಹಲಿ:ದೇಶದಕೆಲವು ರಾಜ್ಯಗಳಲ್ಲಿ ಮಹಾಮಾರಿ ಕೊರೊನಾ ವೈರಸ್‌ನ ಎರಡನೇ ಅಲೆ ಜೋರಾಗಿ ಬೀಸಲು ಆರಂಭವಾಗಿದೆ. ಇದೇ ಇದೇ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಪರೆನ್ಸ್​ ಮೂಲಕ ಮಹತ್ವದ ಚರ್ಚೆ ನಡೆಸಿದರು. ಈ ವೇಳೆ ಅವರು ಮಹತ್ವದ ಸೂಚನೆಗಳನ್ನು ನೀಡಿದರು.

ಸಿಎಂಗಳೊಂದಿಗೆ ಪ್ರಧಾನಿ ಮೋದಿ ಸಂವಾದ

ದೇಶದಲ್ಲಿ ಕೊರೊನಾ ಎರಡನೇ ಅಲೆ ವಿಸ್ತರಣೆಗೆ ಕಡಿವಾಣ ಹಾಕಬೇಕು. ಅದಕ್ಕಾಗಿ ತ್ವರಿತ ಮತ್ತು ನಿರ್ಣಾಯಕ ಕ್ರಮಗಳನ್ನು ತೆಗೆದುಕೊಳ್ಳುವುದು ಅನಿವಾರ್ಯ. ಕೋವಿಡ್​ ಪ್ರಕರಣದ ಹೆಚ್ಚಳದ ಬಗ್ಗೆ ಜನರಲ್ಲಿ ಭಯ ಸೃಷ್ಟಿ ಮಾಡದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಮುಖ್ಯಮಂತ್ರಿಗಳಿಗೆ ಪ್ರಧಾನಿ ಸೂಚನೆಗಳನ್ನು ನೀಡಿದ್ದಾರೆ.

ಗ್ರಾಮೀಣ ಪ್ರದೇಶದಲ್ಲಿ ಕೊರೊನಾ ನಿಯಂತ್ರಣದಲ್ಲಿದೆ. ಇಂತಹ ಪ್ರದೇಶಗಳನ್ನು ಸುರಕ್ಷಿತವಾಗಿಡಲು ಗಮನ ಹರಿಸಬೇಕು. ನಗರ ಪ್ರದೇಶಗಳಲ್ಲಿ ಕೋವಿಡ್ ಟೆಸ್ಟ್​, ಲಸಿಕೆ ವಿತರಣೆ ಕೇಂದ್ರಗಳ ಸಂಖ್ಯೆಯನ್ನು ಹೆಚ್ಚಿಸಬೇಕು. ಇದರ ಜತೆಗೆ ಪ್ರತಿದಿನ 30 ಲಕ್ಷ ಜನರಿಗೆ ಲಸಿಕೆ ನೀಡಲು ಸೂಕ್ತ ಕ್ರಮ ತೆಗೆದುಕೊಳ್ಳಬೇಕು ಎಂದು ಪ್ರಧಾನಿ ತಿಳಿಸಿದರು.

ಟೆಸ್ಟ್​​, ಟ್ರೇಸ್​, ಟ್ರ್ಯಾಕ್​ ಮಂತ್ರದಿಂದ ಕೊರೊನಾ ಸೋಂಕು ನಿಯಂತ್ರಣ ಮಾಡುವ ಅವಶ್ಯಕತೆ ಇದೆ. ಮಾಸ್ಕ್​ ಧರಿಸುವುದು, ಸಾಮಾಜಿಕ ಅಂತರ ಕಾಯ್ದುಕೊಳ್ಳು ಜತೆಗೆ ಹೆಚ್ಚಿನ ಜನರು ಒಟ್ಟಾಗಿ ಒಂದೆಡೆ ಸೇರಿಕೊಳ್ಳದಂತೆ ನೋಡಿಕೊಳ್ಳಬೇಕು. ಕಂಟೋನ್ಮೆಂಟ್​ ಪ್ರದೇಶಗಳಲ್ಲಿ ತ್ವರಿತಗತಿಯ ಚಿಕಿತ್ಸೆ ನೀಡುವುದರ ಜತೆಗೆ ಆರ್​ಟಿ-ಪಿಸಿಆರ್​ ಪರೀಕ್ಷೆ ಸಾಮರ್ಥ್ಯ ಹೆಚ್ಚಿಸಬೇಕು. ವಿದೇಶಿ ಪ್ರವಾಸಿಗರ ಮೇಲೆ ಹೆಚ್ಚಿನ ನಿಗಾ ವಹಿಸುವಂತೆಯೂ ಅವರು ಹೇಳಿದರು.

ಇದನ್ನೂ ಓದಿ: 70 ಜಿಲ್ಲೆಗಳಲ್ಲಿ ಶೇ 150ರಷ್ಟು ಕೋವಿಡ್ ಕೇಸ್ ವೃದ್ಧಿ: ಸಿಎಂಗಳ ಜತೆ ಮೋದಿ ಸಭೆಯ ಆ್ಯಕ್ಷನ್ ಪ್ಲಾನ್ ಏನಿರಲಿದೆ?

ದೇಶದ ಜನರು ಕೊರೊನಾ ವ್ಯಾಕ್ಸಿನ್ ಪಡೆದುಕೊಳ್ಳುವಂತೆ ಉತ್ತೇಜನ ಮಾಡಲು ಕ್ರಮ ಕೈಗೊಳ್ಳಿ. ಈ ನಿಟ್ಟಿನಲ್ಲಿ ಲಸಿಕಾ ಕೇಂದ್ರಗಳನ್ನೂ ಹೆಚ್ಚಿಸಿ. ಯಾವುದೇ ಕಾರಣಕ್ಕೂ ಕೊರೊನಾ ಲಸಿಕೆ ವೇಸ್ಟ್​ ಆಗದಂತೆ ನೋಡಿಕೊಳ್ಳಬೇಕಾಗಿದೆ ಎಂದರು.

ಪ್ರಮುಖಾಂಶಗಳು ಇಂತಿವೆ..

  • ಆರ್​ಟಿಪಿಸಿಆರ್​ ಪರೀಕ್ಷೆ ಪ್ರಮಾಣ ಹೆಚ್ಚಿಸಲು ಕ್ರಮ
  • ದೇಶದಲ್ಲಿ ಕೊರೊನಾ ಎರಡನೇ ಅಲೆ ವಿಸ್ತರಣೆಗೆ ಕಡಿವಾಣ
  • ಲಸಿಕೆಗಳು ವ್ಯರ್ಥವಾಗದಂತೆ ಕ್ರಮ ಕೈಗೊಳ್ಳುವುದು
  • ಸಾರ್ವಜನಿಕರಲ್ಲಿ ಭೀತಿಗೊಳಗಾಗದಂತೆ ನೋಡಿಕೊಳ್ಳುವುದು
  • ಸಣ್ಣ ನಗರ ಹಾಗೂ ನಗರ ಪ್ರದೇಶಗಳಲ್ಲಿ ಹೆಚ್ಚಿನ ಕೋವಿಡ್​ ಟೆಸ್ಟ್​​
  • ಗ್ರಾಮೀಣ ಪ್ರದೇಶಗಳಲ್ಲಿ ಕೋವಿಡ್​ ಹರಡದಂತೆ ತಡೆಗಟ್ಟುವುದು

ABOUT THE AUTHOR

...view details