ನವದೆಹಲಿ :ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಒಮಿಕ್ರಾನ್ ಪ್ರಕರಣಗಳು ಸೇರಿದಂತೆ ಕೋವಿಡ್ ಉಲ್ಬಣಗೊಂಡಿದೆ. ಏಕೀಕೃತ ಕಾರ್ಯತಂತ್ರದ ಅಗತ್ಯವನ್ನು ಕೇಂದ್ರ ಗೃಹ ವ್ಯವಹಾರಗಳ ಸಚಿವಾಲಯ ಎತ್ತಿ ಹಿಡಿದಿದೆ.
ಗುರುವಾರ ಸಂಜೆ ನಡೆದ ಸಭೆಯಲ್ಲಿ ಗೃಹ ಕಾರ್ಯದರ್ಶಿ ಅಜಯ್ ಕುಮಾರ್ ಭಲ್ಲಾ ಅವರು ದೆಹಲಿ-ಎನ್‌ಸಿಆರ್ ಪ್ರದೇಶದಲ್ಲಿ ಪ್ರತಿದಿನ ದಾಖಲೆ ಸಂಖ್ಯೆಯಲ್ಲಿ ಸೋಂಕಿತರು ಪತ್ತೆಯಾಗುತ್ತಿದ್ದಾರೆ. ಮೂರನೇ ಅಲೆ ಎದುರಿಸಲು ಏಕೀಕೃತ ಕಾರ್ಯತಂತ್ರಕ್ಕೆ ಕರೆ ನೀಡಿದ್ದಾರೆ.
ಸಭೆಯಲ್ಲಿ ನೀತಿ ಆಯೋಗದ ಸದಸ್ಯ ಡಾ ವಿ ಕೆ ಪಾಲ್, ಕೇಂದ್ರ ಸರ್ಕಾರದ ಹಿರಿಯ ಅಧಿಕಾರಿಗಳು ಮತ್ತು ಮುಖ್ಯ ಕಾರ್ಯದರ್ಶಿಗಳು ಮತ್ತು ಉತ್ತರ ಪ್ರದೇಶ, ಹರಿಯಾಣ ಮತ್ತು ದೆಹಲಿಯ ಇತರ ಉನ್ನತ ಅಧಿಕಾರಿಗಳು ಉಪಸ್ಥಿತರಿದ್ದರು. ದೆಹಲಿ-ಎನ್‌ಸಿಆರ್ ಪ್ರದೇಶದ ವ್ಯಾಪ್ತಿಯಲ್ಲಿ ದೆಹಲಿ ಸೇರಿದಂತೆ ಉತ್ತರಪ್ರದೇಶ ಮತ್ತು ಹರಿಯಾಣ ರಾಜ್ಯಗಳ ಒಂಬತ್ತು ಗಡಿ ಜಿಲ್ಲೆಗಳು ಬರುತ್ತವೆ.