ನವದೆಹಲಿ: ಭಾರತದ ಜಾವೆಲಿನ್ ಥ್ರೋ ಕ್ರೀಡಾಪಟು ಹಾಗೂ ಚಿನ್ನದ ಪದಕ ವಿಜೇತ ನೀರಜ್ ಚೋಪ್ರಾ ಇದೀಗ ಹೊಸ ರಾಷ್ಟ್ರೀಯ ದಾಖಲೆಯನ್ನು ಬರೆದಿದ್ದಾರೆ. ಫಿನ್‌ಲ್ಯಾಂಡ್‌ನಲ್ಲಿ ನಡೆದ ಪಾವೊ ನೂರ್ಮಿ ಗೇಮ್ಸ್‌ನಲ್ಲಿ 89.30 ಮೀಟರ್ ದೂರಕ್ಕೆ ಜಾವೆಲಿನ್ ಎಸೆದು ಬೆಳ್ಳಿ ಪದಕದೊಂದಿಗೆ ತಮ್ಮ ಹಿಂದಿನ ರಾಷ್ಟ್ರೀಯ ದಾಖಲೆಯನ್ನು ಮುರಿದಿದ್ದಾರೆ.
ಕಳೆದ ವರ್ಷ ನಡೆದ ಟೋಕಿಯೋ ಒಲಿಂಪಿಕ್ಸ್ ಬಳಿಕ ನೀರಜ್ ಚೋಪ್ರಾ ಪಾಲ್ಗೊಂಡ ಮೊದಲ ಅಂತಾರಾಷ್ಟ್ರೀಯ ಕ್ರೀಡಾಕೂಟ ಇದಾಗಿದೆ. 2021, ಆಗಸ್ಟ್ 7ರಂದು ಅವರು ಟೋಕಿಯೋ ಒಲಿಂಪಿಕ್ಸ್‌ನಲ್ಲಿ 87.58 ಮೀಟರ್ ದೂರಕ್ಕೆ ಭರ್ಜಿ ಎಸೆದು ಐತಿಹಾಸಿಕ ಚಿನ್ನದ ಪದಕ ಸಂಪಾದಿಸಿದ್ದರು.