ನವದೆಹಲಿ :ಕೊನೆ ಕ್ಷಣದಲ್ಲಿ ನೀಟ್ ಪರೀಕ್ಷೆ ಮುಂದೂಡಿಕೆ ಮಾಡಿದ್ದಕ್ಕಾಗಿ ಕೇಂದ್ರ ಸರ್ಕಾರದ ವಿರುದ್ಧ ಸುಪ್ರೀಂಕೋರ್ಟ್ ತರಾಟೆ ತೆಗೆದುಕೊಂಡಿದೆ. ಯುವ ವೈದ್ಯರನ್ನ ಫುಟ್ಬಾಲ್ನಂತೆ ನಡೆಸಿಕೊಳ್ಳಬೇಡಿ ಎಂದು ಚಾಟಿ ಬೀಸಿದೆ.
ವೈದ್ಯಕೀಯ ಕೋರ್ಸ್ಗಳಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ(NEET) ಕೊನೆ ಕ್ಷಣದಲ್ಲಿ ಬದಲಾವಣೆ ಮಾಡಿದ್ದಕ್ಕಾಗಿ ಸುಪ್ರೀಂಕೋರ್ಟ್ ಗರಂ ಆಗಿದೆ. ಕೇಂದ್ರದ ವಿರುದ್ಧ ಆಕ್ರೋಶ ಹೊರ ಹಾಕಿದೆ.
ನ್ಯಾಯಮೂರ್ತಿಗಳಾದ ಡಿ ವೈ ಚಂದ್ರಚೂಡ್ ಮತ್ತು ಬಿ ವಿ ನಾಗರತ್ನ ಅವರ ಪೀಠವು ವೈದ್ಯಕೀಯ ಮಂಡಳಿ ಹಾಗೂ ಅಧಿಕಾರಿಗಳಿಗೆ ಸೂಚನೆ ನೀಡಿದೆ. 40ಕ್ಕೂ ಅಧಿಕ ವೈದ್ಯಕೀಯ ಸ್ನಾತಕೋತ್ತರ ವಿದ್ಯಾರ್ಥಿಗಳು ಸಲ್ಲಿಕೆ ಮಾಡಿದ್ದ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ವೇಳೆ ಸುಪ್ರೀಂಕೋರ್ಟ್ ಈ ರೀತಿ ಹೇಳಿದೆ.