ನವದೆಹಲಿ:ನೀಟ್- ಸ್ನಾತಕೋತ್ತರ ಪದವಿ ಪ್ರವೇಶಕ್ಕೆ ಕೌನ್ಸಿಲಿಂಗ್ ಜನವರಿ 12ರಂದು ಪ್ರಾರಂಭವಾಗಲಿದೆ ಎಂದು ಕೇಂದ್ರ ಆರೋಗ್ಯ ಸಚಿವ ಮನ್ಸುಖ್ ಮಾಂಡವಿಯಾ ತಿಳಿಸಿದ್ದಾರೆ.
ಸುಪ್ರೀಂಕೋರ್ಟ್ ಆದೇಶ ಅನುಸರಿಸಿ, ಮೆಡಿಕಲ್ ಕೌನ್ಸಿಲಿಂಗ್ ಕಮಿಟಿ ಮೂಲಕ ನೀಟ್-ಪಿಜಿ ಪ್ರವೇಶಕ್ಕೆ ಕೌನ್ಸಿಲಿಂಗ್ ನಡೆಸಲಾಗುತ್ತಿದೆ. ದೇಶ ಕೋವಿಡ್ ವಿರುದ್ಧ ನಡೆಸುತ್ತಿರುವ ಹೋರಾಟದಲ್ಲಿ ಇದು ಅತ್ಯಂತ ಮಹತ್ವದ ಹೆಜ್ಜೆಯಾಗಲಿರಲಿದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.