ಕರ್ನಾಟಕ

karnataka

ETV Bharat / bharat

46 ಸಾವಿರ ಮೃತ ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ನಿಧಿ: ತನಿಖೆಗೆ ಆದೇಶ - ಕಿಸಾನ್ ಸಮ್ಮಾನ್ ನಿಧಿ ಕಂತು

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರವು ಪ್ರತಿ ವರ್ಷ 6 ಸಾವಿರ ರೂಪಾಯಿಗಳನ್ನು 2 ಸಾವಿರದ ಮೂರು ಕಂತುಗಳ ಮೂಲಕ ಅರ್ಹ ರೈತರ ಖಾತೆಗಳಿಗೆ ವರ್ಗಾಯಿಸುತ್ತದೆ. ಈ ಯೋಜನೆಯಡಿ ಉತ್ತರ ಪ್ರದೇಶದಲ್ಲಿ 2 ಕೋಟಿ 55 ಲಕ್ಷ 80 ಸಾವಿರ ರೈತರ ಖಾತೆಗಳಿಗೆ 45 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಸಂದಾಯವಾಗಿದೆ.

negligence-of-officers-funds-sent-to-the-account-of-deceased-farmers
negligence-of-officers-funds-sent-to-the-account-of-deceased-farmers

By

Published : Jul 12, 2022, 3:30 PM IST

ಲಖನೌ: ಅಧಿಕಾರಿಗಳ ನಿರ್ಲಕ್ಷ್ಯ ಮತ್ತು ಬೇಜವಾಬ್ದಾರಿಯಿಂದ ಹಲವಾರು ಜಿಲ್ಲೆಗಳಲ್ಲಿ ಮೃತ ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ನಿಧಿ ಪಾವತಿ ಮಾಡಿರುವ ವಿಷಯ ಸರಕಾರದ ಗಮನಕ್ಕೆ ಬಂದಿದೆ. ಉತ್ತರ ಪ್ರದೇಶದ ಎಲ್ಲ 75 ಜಿಲ್ಲೆಗಳ 46 ಸಾವಿರಕ್ಕೂ ಹೆಚ್ಚು ಮೃತ ರೈತರ ಖಾತೆಗಳಿಗೆ ಕಿಸಾನ್ ಸಮ್ಮಾನ್ ನಿಧಿ ಸಂದಾಯ ಮಾಡಲಾಗಿದೆ.

ಇಲಾಖೆಯಿಂದ ಸಾಮಾಜಿಕ ಲೆಕ್ಕ ಪರಿಶೋಧನೆ ನಡೆಸಿ ಪರಿಶೀಲನೆ ನಡೆಸಿದಾಗ ಈ ದೊಡ್ಡ ವಂಚನೆ ನಡೆದಿರುವುದು ಬೆಳಕಿಗೆ ಬಂದಿದೆ. ಇದೀಗ ಯೋಗಿ ಆದಿತ್ಯನಾಥ್ ಸರ್ಕಾರ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದ್ದು, ಪ್ರಕರಣದ ತನಿಖೆ ನಡೆಸುವಂತೆ ಮತ್ತು ಹಣ ವಸೂಲಿ ಮಾಡುವಂತೆ ಆದೇಶ ನೀಡಲಾಗಿದೆ.

ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೇಂದ್ರ ಸರ್ಕಾರವು ಪ್ರತಿ ವರ್ಷ 6 ಸಾವಿರ ರೂಪಾಯಿಗಳನ್ನು 2 ಸಾವಿರದ ಮೂರು ಕಂತುಗಳ ಮೂಲಕ ಅರ್ಹ ರೈತರ ಖಾತೆಗಳಿಗೆ ವರ್ಗಾಯಿಸುತ್ತದೆ. ಈ ಯೋಜನೆಯಡಿ ಉತ್ತರ ಪ್ರದೇಶದಲ್ಲಿ 2 ಕೋಟಿ 55 ಲಕ್ಷ 80 ಸಾವಿರ ರೈತರ ಖಾತೆಗಳಿಗೆ 45 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಹಣ ಸಂದಾಯವಾಗಿದೆ. ಇಲಾಖಾ ಮಟ್ಟದಲ್ಲಿ ಹಣ ವರ್ಗಾವಣೆಯ ಸಾಮಾಜಿಕ ಲೆಕ್ಕ ಪರಿಶೋಧನೆ ನಡೆಸಿದಾಗ ಪ್ರಮಾದವಾಗಿರುವ ಆಘಾತಕಾರಿ ಪ್ರಕರಣ ಬೆಳಕಿದೆ ಬಂದಿದೆ. ರಾಜ್ಯದಲ್ಲಿ ಮೃತಪಟ್ಟಿರುವ ಸುಮಾರು 46,000 ರೈತರ ಖಾತೆಗಳಿಗೆ ಹಣ ವರ್ಗಾವಣೆ ಮಾಡಿರುವುದು ತಿಳಿದು ಬಂದಿದೆ.

ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಮಾತನಾಡಿ, ಮೃತ ರೈತರ ಖಾತೆಯಲ್ಲಿ ಹಣ ವರ್ಗಾವಣೆಯಾಗಿರುವ ಅವಲಂಬಿತರು ಅಥವಾ ಸಹ -ಖಾತೆದಾರರನ್ನು ಸಂಪರ್ಕಿಸಿದಾಗ, ರೂ. ಇದಲ್ಲದೇ ಪರಿಶೀಲನೆ ನಡೆಸದೇ ಮೃತಪಟ್ಟ ರೈತರ ಖಾತೆಗೆ ಹಣ ವರ್ಗಾವಣೆ ಮಾಡುವ ಅಧಿಕಾರಿಗಳ ವಿರುದ್ಧವೂ ಇಲಾಖಾ ಕ್ರಮ ಕೈಗೊಳ್ಳಲಾಗುವುದು.

ಯಾವೆಲ್ಲ ಮೃತ ರೈತರ ಖಾತೆಗಳಿಗೆ ಹಣ ಜಮೆಯಾಗಿದೆಯೋ ಅಂಥವರ ಅವಲಂಬಿತರು ಅಥವಾ ಜಂಟಿ ಖಾತೆದಾರರನ್ನು ಸಂಪರ್ಕಿಸಿ ಹಣ ವಸೂಲಿ ಮಾಡುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ ಎಂದು ಸರ್ಕಾರದ ಹಿರಿಯ ಅಧಿಕಾರಿಯೊಬ್ಬರು ಹೇಳಿದರು.

ಫಲಾನುಭವಿ ರೈತರು ಬದುಕಿರುವ ಬಗ್ಗೆ ಪರಿಶೀಲನೆ ಮಾಡದೇ ಮೃತರ ಖಾತೆಗಳಿಗೆ ಹಣ ಸಂದಾಯವಾಗಲು ಕಾರಣರಾದ ಅಧಿಕಾರಿಗಳ ವಿರುದ್ಧ ಇಲಾಖಾ ವಿಚಾರಣೆ ನಡೆಸಲಾಗುವುದು ಎಂದು ಅವರು ತಿಳಿಸಿದರು.

ಇದನ್ನು ಓದಿ:ಪಂಜಾಬ್​​ನಲ್ಲಿ ಭೀಕರ ಅಪಘಾತ: ಶಿಕ್ಷಕಿ ಮೇಲೆ ಹರಿದ ಟ್ರಕ್​​, ಸ್ಥಳದಲ್ಲೇ ದುರ್ಮರಣ

ABOUT THE AUTHOR

...view details