ಕರ್ನಾಟಕ

karnataka

ETV Bharat / bharat

ಸೇನೆಯ ನೂತನ ಉಪ ಮುಖ್ಯಸ್ಥರಾಗಿ ಅಧಿಕಾರ ಸ್ವೀಕರಿಸಿದ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ - ಪೂರ್ವ ಸೇನಾ ಕಮಾಂಡರ್ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ

ಸೇನೆಯ ನೂತನ ಉಪ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ಇಂದು ಅಧಿಕಾರ ಸ್ವೀಕರಿಸಿದರು..

ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ
ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ

By

Published : Feb 1, 2022, 11:38 AM IST

ನವದೆಹಲಿ: ಲೆಫ್ಟಿನೆಂಟ್ ಜನರಲ್ ಮನೋಜ್ ಪಾಂಡೆ ಅವರು ಇಂದು ಸೇನೆಯ ನೂತನ ಉಪ ಮುಖ್ಯಸ್ಥರಾಗಿ ಅಧಿಕಾರ ವಹಿಸಿಕೊಂಡು ಸೌತ್ ಬ್ಲಾಕ್‌ನಲ್ಲಿ ಗೌರವ ವಂದನೆ ಸ್ವೀಕರಿಸಿದರು.

ಪೂರ್ವ ಸೇನಾ ಕಮಾಂಡರ್ ಆಗಿದ್ದ ಲೆಫ್ಟಿನೆಂಟ್ ಜನರಲ್ ಪಾಂಡೆ ಅವರು ನವದೆಹಲಿಯ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೆ ಪುಷ್ಪಾರ್ಚನೆ ಮಾಡಿ, ಜನವರಿ 31ರಂದು ನಿವೃತ್ತಿ ಹೊಂದಿದ್ದ ಲೆಫ್ಟಿನೆಂಟ್ ಜನರಲ್ ಸಿಪಿ ಮೊಹಂತಿ ಅವರ ಸ್ಥಾನವನ್ನು ಅಲಂಕರಿಸಿದರು.

ಪಾಂಡೆ ಅವರು ಡಿಸೆಂಬರ್ 1982ರಲ್ಲಿ ಕಾರ್ಪ್ಸ್ ಆಫ್ ಇಂಜಿನಿಯರ್ಸ್ (ದಿ ಬಾಂಬೆ ಸಪ್ಪರ್ಸ್)ಗೆ ನೇಮಕಗೊಂಡರು. ಕ್ಯಾಂಬರ್ಲಿ (ಯುನೈಟೆಡ್ ಕಿಂಗ್‌ಡಮ್) ಸ್ಟಾಫ್ ಕಾಲೇಜಿನಲ್ಲಿ ಪದವಿ ಪಡೆದಿದ್ದಾರೆ ಮತ್ತು ಆರ್ಮಿ ವಾರ್ ಕಾಲೇಜ್, ಮೊವ್ ಮತ್ತು ನ್ಯಾಷನಲ್ ಡಿಫೆನ್ಸ್ ಕಾಲೇಜಿನಲ್ಲಿ (NDC) ಹೈಯರ್ ಕಮಾಂಡ್ ಕೋರ್ಸ್‌ಗೆ ಹಾಜರಾಗಿದ್ದರು.

37 ವರ್ಷಗಳಿಂದ ವಿಶಿಷ್ಟ ಸೇವೆ ಸಲ್ಲಿಸುತ್ತಿರುವ ಪಾಂಡೆ ಅವರು ಆಪರೇಷನ್ ವಿಜಯ್ ಮತ್ತು ಆಪರೇಷನ್ ಪರಾಕ್ರಮ್‌ನಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಾರೆ.

ನಿಮ್ಮ ಸೂಕ್ತ ಸಂಗಾತಿ ಹುಡುಕುತ್ತಿರುವಿರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ ನೋಂದಣಿ ಉಚಿತ

ABOUT THE AUTHOR

...view details