ಕರ್ನಾಟಕ

karnataka

ETV Bharat / bharat

ಶುಕ್ರವಾರ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕಾರ - ಅಲ್ಬರ್ಟ್​ ಹಾಲ್​ನಲ್ಲಿ ಭರದ ಸಿದ್ಧತೆ

Rajasthan Oath Taking Ceremony: ಡಿಸೆಂಬರ್​ 15ರಂದು ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್​ ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕರಿಸಲಿದ್ದಾರೆ

new-chief-minister-of-rajasthan-oath-taking-ceremony-pm-modi-amit-shah-in-jaipur
ನಾಳೆ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕಾರ

By ETV Bharat Karnataka Team

Published : Dec 14, 2023, 10:11 PM IST

Updated : Dec 15, 2023, 7:31 AM IST

ಜೈಪುರ್​(ರಾಜಸ್ಥಾನ): ಇತ್ತೀಚೆಗೆ ನಡೆದ ರಾಜಸ್ಥಾನ ವಿಧಾನಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿರುವ ಬಿಜೆಪಿ ಸರ್ಕಾರ ರಚಿಸಲು ಸಜ್ಜಾಗಿದೆ. ಈಗಾಗಲೇ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಭಜನ್​ ಲಾಲ್​ ಶರ್ಮಾ ಅವರನ್ನು ಆಯ್ಕೆ ಮಾಡಿದ್ದು, ಡಿ.15ರಂದು ಅವರು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ ಮಾಡಲಿದ್ದಾರೆ.

ಶುಕ್ರವಾರ ರಾಜಸ್ಥಾನದ ನೂತನ ಮುಖ್ಯಮಂತ್ರಿಯಾಗಿ ಭಜನ್ ಲಾಲ್​ ಶರ್ಮಾ ಪ್ರಮಾಣವಚನ ಸ್ವೀಕಾರ

ಇದೇ ಮೊದಲ ಬಾರಿಗೆ ಶಾಸಕರಾಗಿ ಆಯ್ಕೆಯಾಗಿರುವ ಭಜನ್​ ಲಾಲ್ ಶರ್ಮಾ ಅವರು ಶುಕ್ರವಾರದಂದು ರಾಜ್ಯದ 16 ನೇ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇವರ ಜೊತೆಗೆ ಉಪಮುಖ್ಯಮಂತ್ರಿಗಳಾಗಿ ದಿಯಾ ಕುಮಾರಿ ಮತ್ತು ಪ್ರೇಮ್​ಚಂದ್​ ಭೈರವಾ ಅವರು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಜೈಪುರದ ರಾಮ್​ನಿವಾಸ್​ ಭಾಗ್​ನ ಅಲ್ಬರ್ಟ್​ ಹಾಲ್​ನಲ್ಲಿ ಪದಗ್ರಹಣ

ಜೈಪುರದ ರಾಮ್​ನಿವಾಸ್​ ಭಾಗ್​ನ ಅಲ್ಬರ್ಟ್​ ಹಾಲ್​ನಲ್ಲಿ ಶುಕ್ರವಾರ ಮಧ್ಯಾಹ್ನ 12.15ಕ್ಕೆ ಪದಗ್ರಹಣ ಸಮಾರಂಭ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್​ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ, ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಸೇರಿ ಹಲವು ಬಿಜೆಪಿ ನಾಯಕರು ಭಾಗವಹಿಸಲಿದ್ದಾರೆ. ರಾಜ್ಯದ ಸುಮಾರು 1 ಲಕ್ಷಕ್ಕೂ ಅಧಿಕ ಜನರು ಪದಗ್ರಹಣ ಕಾರ್ಯಕ್ರಮಕ್ಕೆ ಸಾಕ್ಷಿಯಾಗಲಿದ್ದಾರೆ.

1 ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆ

1 ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆ: ಪದಗ್ರಹಣ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷಕ್ಕೂ ಅಧಿಕ ಜನ ಭಾಗಿಯಾಗುವ ನಿರೀಕ್ಷೆ ಇದೆ. ಈ ಬಗ್ಗೆ ಬಿಜೆಪಿ ಅಧಿಕೃತವಾಗಿ ಮಾಹಿತಿ ನೀಡದಿದ್ದರೂ ಭರದ ಸಿದ್ಧತೆ ನಡೆಸಿದೆ. ರಾಜ್ಯದ ವಿವಿಧೆಡೆಯಿಂದ ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸುವ ನಿರೀಕ್ಷೆಯನ್ನು ಬಿಜೆಪಿ ಇಟ್ಟುಕೊಂಡಿದೆ. ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯ ಜನರನ್ನು ಕರೆತರಲು ನೂತನ ಶಾಸಕರಿಗೆ ಸೂಚಿಸಲಾಗಿದೆ. ಇದರ ಜೊತೆಗೆ ಪ್ರತಿ ಜಿಲ್ಲಾಕೇಂದ್ರದಿಂದ ಸಾಕಷ್ಟು ಜನರನ್ನು ಕರೆ ತರಲು ಜಿಲ್ಲಾಧ್ಯಕ್ಷರಿಗೆ ಸೂಚಿಸಲಾಗಿದೆ ಎಂದು ತಿಳಿದುಬಂದಿದೆ.

ಅಲ್ಬರ್ಟ್​ ಹಾಲ್​ನಲ್ಲಿ ಭರದ ಸಿದ್ಧತೆ: ಪದಗ್ರಹಣ ಸಮಾರಂಭದ ಹಿನ್ನೆಲೆ ಅಲ್ಬರ್ಟ್​ ಹಾಲ್​ನಲ್ಲಿ ಭರದ ಸಿದ್ಧತೆಯನ್ನು ನಡೆಸಲಾಗಿದೆ. ಈಗಾಗಲೇ ಸಮಾರಂಭದ ಸಿದ್ಧತೆಗಳು ಪೂರ್ಣಗೊಂಡಿದೆ. ಕಾರ್ಯಕ್ರಮ ನಡೆಯುವ ಸ್ಥಳದಲ್ಲಿ ಬಿಜೆಪಿ ಧ್ವಜಗಳು ರಾರಾಜಿಸುತ್ತಿವೆ. ಅಲ್ಬರ್ಟ್​ ಹಾಲ್​ ಸಂಪೂರ್ಣ ಕೆಸರೀಮಯವಾಗಿದೆ. ಸ್ಥಳದಲ್ಲಿ ಗಣ್ಯರಿಗೆ ಮತ್ತು ಆಹ್ವಾನಿತರಿಗೆ ವಿಶೇಷ ಆಸನದ ವ್ಯವಸ್ಥೆ ಮಾಡಲಾಗಿದೆ. ಅಲ್ಲದೇ ಕಾರ್ಯಕ್ರಮಕ್ಕೆ ಆಗಮಿಸುವ ಜನರಿಗೂ ಪ್ರತ್ಯೇಕ ಆಸನ ವ್ಯವಸ್ಥೆ ಕಲ್ಪಿಸಲಾಗಿದೆ.

ಲೋಕಸಭೆ ಚುನಾವಣೆಗೂ ಸಿದ್ಧತೆ : ವಿಧಾನಸಭೆ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಜಯ ಸಾಧಿಸಿದ ಬಳಿಕ ಇದೀಗ ಮುಂಬರುವ ಲೋಕಸಭೆ ಚುನಾವಣೆಗೂ ಸಜ್ಜಾಗುತ್ತಿದೆ. ಈ ಸಂಬಂಧ ಪದಗ್ರಹಣ ಕಾರ್ಯಕ್ರಮವನ್ನು ಬಹಳ ಅದ್ಧೂರಿಯಾಗಿ ನಡೆಸಲು ಬಿಜೆಪಿ ತೀರ್ಮಾನಿಸಿದೆ. ಈ ಮೂಲಕ ರಾಜ್ಯದಲ್ಲಿ ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಮಲ ಅರಳಿಸಲು ಬಿಜೆಪಿ ರಣತಂತ್ರ ರೂಪಿಸಿದೆ.

ಇದನ್ನೂ ಓದಿ :ಧಾರ್ಮಿಕ ಸ್ಥಳದಲ್ಲಿ ಧ್ವನಿ ವರ್ಧಕ, ತೆರೆದ ಜಾಗದಲ್ಲಿ ಮಾಂಸ ಮಾರಾಟಕ್ಕೆ ನಿಷೇಧ: ಮಧ್ಯ ಪ್ರದೇಶ ಸಿಎಂ ಮೊದಲ ನಿರ್ಧಾರ

Last Updated : Dec 15, 2023, 7:31 AM IST

ABOUT THE AUTHOR

...view details