ಕರ್ನಾಟಕ

karnataka

ETV Bharat / bharat

ಇಂದು ಮಧ್ಯಪ್ರದೇಶ, ಛತ್ತೀಸ್‌ಗಢದ ನೂತನ ಸಿಎಂಗಳ ಪ್ರಮಾಣವಚನ ಸ್ವೀಕಾರ - ವಿಷ್ಣು ದೇವ್ ಸಾಯಿ

New Madhya Pradesh, Chhattisgarh CMs oath taking: ಮಧ್ಯಪ್ರದೇಶ ನೂತನ ಸಿಎಂ ಆಗಿ ಮೋಹನ್ ಯಾದವ್ ಹಾಗೂ ಛತ್ತೀಸ್‌ಗಢದ ಹೊಸ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಇಂದು (ಬುಧವಾರ) ಪ್ರಮಾಣವಚನ ಸ್ವೀಕರಿಸಲಿದ್ದಾರೆ.

New Madhya Pradesh, Chhattisgarh CMs to take oath today
ಮಧ್ಯಪ್ರದೇಶ, ಛತ್ತೀಸ್‌ಗಢದ ನೂತನ ಸಿಎಂಗಳ ಪ್ರಮಾಣ ವಚನ ಸ್ವೀಕಾರ

By ANI

Published : Dec 13, 2023, 10:57 AM IST

ನವದೆಹಲಿ:ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್, ಛತ್ತೀಸ್‌ಗಢದ ನೂತನ ಸಿಎಂ ಆಗಿ ವಿಷ್ಣು ದೇವ್ ಸಾಯಿ ಇಂದು ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಪ್ರದೇಶದ ಲಾಲ್ ಪರೇಡ್ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮೋಹನ್ ಯಾದವ್ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ವಿಷ್ಣು ಸಾಯಿ ಅವರು ಮಧ್ಯಾಹ್ನ 2 ಗಂಟೆಗೆ ಛತ್ತೀಸ್‌ಗಢದ ರಾಯ್‌ಪುರದ ಸೈನ್ಸ್ ಕಾಲೇಜು ಮೈದಾನದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ನರೇಂದ್ರ ಮೋದಿ, ಅಮಿತ್ ಶಾ ಭಾಗಿ:ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸೇರಿದಂತೆ ಇತರರು ಎರಡೂ ಸ್ಥಳಗಳಲ್ಲಿ ನಡೆಯಲಿರುವ ಪ್ರಮಾಣವಚನ ಸ್ವೀಕಾರ ಸಮಾರಂಭದಲ್ಲಿ ಪಾಲ್ಗೊಳ್ಳುವ ಸಾಧ್ಯತೆಯಿದೆ. ಮಧ್ಯಪ್ರದೇಶದಲ್ಲಿ ಉಪ ಮುಖ್ಯಮಂತ್ರಿಯಾಗಿ ರಾಜೇಂದ್ರ ಶುಕ್ಲಾ ಮತ್ತು ಜಗದೀಶ್ ದೇವದಾ ಅಧಿಕಾರ ಸ್ವೀಕರಿಸಲಿದ್ದಾರೆ. ಕೇಂದ್ರ ಮಾಜಿ ಸಚಿವ ನರೇಂದ್ರ ಸಿಂಗ್ ತೋಮರ್ ಅವರು ಅಸೆಂಬ್ಲಿ ಸ್ಪೀಕರ್ ಆಗಲಿದ್ದಾರೆ.

''ನಮ್ಮ ನೂತನ ಮುಖ್ಯಮಂತ್ರಿ ಮೋಹನ್ ಯಾದವ್ ಮತ್ತು ಅವರ ಸಂಪುಟದ ಸಚಿವರು ಬುಧವಾರ ಮೋತಿಲಾಲ್ ನೆಹರು ಕ್ರೀಡಾಂಗಣದಲ್ಲಿ ನಡೆಯುವ ಸಮಾರಂಭದಲ್ಲಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಸಚಿವ ಅಮಿತ್ ಶಾ ಮತ್ತು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಅವರ ಸಮ್ಮುಖದಲ್ಲಿ ಕಾರ್ಯಕ್ರಮ ಜರುಗಲಿದೆ'' ಎಂದು ಬಿಜೆಪಿ ರಾಜ್ಯಾಧ್ಯಕ್ಷ ವಿಡಿ ಶರ್ಮಾ ಹೇಳಿದ್ದಾರೆ. "ಪಕ್ಷದ ಪ್ರಮುಖ ನಾಯಕರು, ಕೇಂದ್ರ ಸಚಿವರು ಮತ್ತು ಇತರ ರಾಜ್ಯಗಳ ಮುಖ್ಯಮಂತ್ರಿಗಳು ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ. ಜೊತೆಗೆ ಹೆಚ್ಚಿನ ಸಂಖ್ಯೆಯಲ್ಲಿ ಪಕ್ಷದ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ. ಕಾರ್ಯಕ್ರಮದಲ್ಲಿ ಭಾಗವಹಿಸಲು ಪ್ರತಿಯೊಬ್ಬರನ್ನು ನಾನು ಸ್ವಾಗತಿಸುತ್ತೇನೆ" ಎಂದು ತಿಳಿಸಿದರು.

ಮಧ್ಯಪ್ರದೇಶದಲ್ಲಿ 163 ಸ್ಥಾನಗಳನ್ನು ಗೆದ್ದ ಬಿಜೆಪಿ:ಮಧ್ಯಪ್ರದೇಶದಲ್ಲಿ ನ.17 ರಂದು 230 ವಿಧಾನಸಭಾ ಸ್ಥಾನಗಳಿಗೆ ಚುನಾವಣೆ ನಡೆದಿತ್ತು. ಡಿಸೆಂಬರ್ 3 ರಂದು ಮತ ಎಣಿಕೆ ಜರುಗಿತ್ತು. ಬಿಜೆಪಿ 163 ಸ್ಥಾನಗಳನ್ನು ಗೆದ್ದುಕೊಂಡಿದೆ. ಆದರೆ, ಕಾಂಗ್ರೆಸ್ 66 ಸ್ಥಾನಗಳೊಂದಿಗೆ ಎರಡನೇ ಸ್ಥಾನವನ್ನು ಗಳಿಸಿದೆ.

ಛತ್ತೀಸ್‌ಗಢದಲ್ಲಿ ಬಿಜೆಪಿ ನಾಯಕ ವಿಜಯ್ ಕುಮಾರ್ ಶರ್ಮಾ ಮಂಗಳವಾರ ಮಾತನಾಡಿ, ''ಛತ್ತೀಸ್‌ಗಢದ ನೂತನ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ ಮತ್ತು ಪಕ್ಷದ ಇತರ ಹಿರಿಯ ನಾಯಕರು ಪ್ರಮಾಣವಚನ ಸಮಾರಂಭದಲ್ಲಿ ಪಾಲ್ಗೊಳ್ಳಲಿದ್ದಾರೆ'' ಎಂದು ತಿಳಿಸಿದರು.

"ಮಧ್ಯಪ್ರದೇಶದ ನಿಯೋಜಿತ ಸಿಎಂ ಮೋಹನ್ ಯಾದವ್ ಅವರಿಗೆ ಶುಭಾಶಯಗಳು. ಮೋಹನ್ ಯಾದವ್ ಅವರು ತುಂಬಾ ಧೈರ್ಯಶಾಲಿ ಮತ್ತು ತುಂಬಾ ಶ್ರಮಿಸುವ ವ್ಯಕ್ತಿ. ಮಧ್ಯಪ್ರದೇಶವು ಮತ್ತಷ್ಟು ಎತ್ತರ ಸಾಗಲಿದೆ ಎಂದು ನಾನು ಭಾವಿಸುತ್ತೇನೆ" ಎಂದು ವಿಜಯ್ ಕುಮಾರ್ ಶರ್ಮಾ ತಿಳಿಸಿದರು.

"ವಿಷ್ಣುದೇವ್ ಸಾಯಿ ಅವರು ಮಂಗಳವಾರ ದೂರವಾಣಿ ಕರೆ ಮೂಲಕ ಛತ್ತೀಸ್‌ಗಢದ ಮಾಜಿ ಸಿಎಂ ಭೂಪೇಶ್ ಬಾಘೇಲ್, ಮಾಜಿ ಉಪ ಮುಖ್ಯಮಂತ್ರಿ ಟಿಎಸ್ ಸಿಂಗ್ ದೇವು ಮತ್ತು ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ದೀಪಕ್ ಬೈಜ್ ಅವರನ್ನು ರಾಯ್‌ಪುರದ ವಿಜ್ಞಾನ ಕಾಲೇಜು ಮೈದಾನದಲ್ಲಿ ಆಯೋಜಿಸಲಾದ ಪ್ರಮಾಣವಚನ ಸಮಾರಂಭಕ್ಕೆ ಆಹ್ವಾನಿಸಿದ್ದಾರೆ'' ಎಂದರು.

ಛತ್ತೀಸ್‌ಗಢದ 54 ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು:ನಿಯೋಜಿತ ನೂತನ ಮುಖ್ಯಮಂತ್ರಿ ವಿಷ್ಣುದೇವ್ ಸಾಯಿ ಅವರು ಗ್ರಾಮದ ಸರಪಂಚ್ ಆಗಿ ತಮ್ಮ ರಾಜಕೀಯ ಜೀವನವನ್ನು ಪ್ರಾರಂಭಿಸಿದ್ದರು. 1989ರಲ್ಲಿ ಅವರು ಬಾಗಿಯಾ ಗ್ರಾಮ ಪಂಚಾಯ್ತಿಗೆ ಆಯ್ಕೆಯಾದರು. ಮರುವರ್ಷವೇ ಅವರು ಅವಿರೋಧವಾಗಿ ಸರಪಂಚ್​ ಆಗಿ ಆಯ್ಕೆಯಾಗಿದ್ದರು. 1999 ರಿಂದ 2014ರ ವರೆಗೆ ರಾಯಗಢ ಕ್ಷೇತ್ರದಿಂದ ಸತತ ನಾಲ್ಕು ಲೋಕಸಭಾ ಚುನಾವಣೆಯಲ್ಲಿ ವಿಷ್ಣು ದೇವ್ ಗೆದ್ದಿದ್ದಾರೆ. 2019 ರ ಲೋಕಸಭೆ ಚುನಾವಣೆಯಲ್ಲಿ ಅವರಿಗೆ ಟಿಕೆಟ್ ನೀಡಿರಲಿಲ್ಲ. ಛತ್ತೀಸ್‌ಗಢದ 90 ವಿಧಾನಸಭಾ ಕ್ಷೇತ್ರಗಳ ಪೈಕಿ ಬಿಜೆಪಿ 54 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಇನ್ನು ಕಾಂಗ್ರೆಸ್​ 35 ಸ್ಥಾನಗಳನ್ನು ತನ್ನದಾಗಿಸಿಕೊಂಡಿದೆ.

ಇದನ್ನೂ ಓದಿ:'ಪುತ್ರನ ಮೊದಲ ಆಯ್ಕೆಯೇ ರಾಜಕೀಯ': ರಾಜಸ್ಥಾನ ನಿಯೋಜಿತ ಸಿಎಂ ಭಜನ್​ಲಾಲ್ ಶರ್ಮಾ ತಾಯಿ ಮಾತು

ABOUT THE AUTHOR

...view details