ನವದೆಹಲಿ: 2022-2023ರ ಬಜೆಟ್ ಭಾಷಣದಲ್ಲಿ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಈಶಾನ್ಯಕ್ಕೆ 'ಪ್ರಧಾನ ಮಂತ್ರಿ ಅಭಿವೃದ್ಧಿ ಉಪಕ್ರಮ'ವನ್ನು ಪ್ರಾರಂಭಿಸುವ ವಿಚಾರವನ್ನು ಪ್ರಸ್ತಾಪಿಸಿದರು.
ಈಶಾನ್ಯ ರಾಜ್ಯಗಳ ಬೆಳವಣಿಗೆಯನ್ನು ಉತ್ತೇಜಿಸಲು 'ಪಿಎಂ ಡೆವಲಪ್‌ಮೆಂಟ್ ಇನಿಶಿಯೇಟಿವ್' ಎಂಬ ಹೊಸ ಯೋಜನೆಯನ್ನು ಪ್ರಾರಂಭಿಸುವ ವಿಚಾರವನ್ನು ಅವರು ಪ್ರಸ್ತಾಪಿಸಿದ್ದಾರೆ. ಭಾರತದ ಉತ್ತರದ ಗಡಿಯಲ್ಲಿರುವ ಗ್ರಾಮಗಳ ಅಭಿವೃದ್ಧಿಪಡಿಸಲಾಗುವುದು ಎಂದು ಅವರು ಇದೇ ವೇಳೆ ಘೋಷಿಸಿದ್ದಾರೆ.