ಪಂಜಾಬ್: ಕಳೆದ ಹಲವು ದಿನಗಳಿಂದ ನಡೆಯುತ್ತಿದ್ದ ರಾಜಕೀಯ ಬಿಕ್ಕಟ್ಟಿನ ಬಳಿಕ ಪಂಜಾಬ್ ನೂತನ ಕಾಂಗ್ರೆಸ್ ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಸಿಎಂ ಕ್ಯಾಪ್ಟನ್ ಅಮರೀಂದರ್ ಸಿಂಗ್ ಉಪಸ್ಥಿತಿಯಲ್ಲಿ ಪಂಜಾಬ್ ಪ್ರದೇಶ ಕಾಂಗ್ರೆಸ್ ಸಮಿತಿ(ಪಿಪಿಸಿಸಿ) ಅಧ್ಯಕ್ಷರಾಗಿ ನವಜೋತ್ ಸಿಂಗ್ ಸಿಧು ಅಧಿಕಾರ ವಹಿಸಿಕೊಂಡಿದ್ದು, ಈ ವೇಳೆ ಕ್ರಿಕೆಟ್‌ನಲ್ಲಿ ಸಿಕ್ಸರ್ ಸಿಡಿಸುತ್ತಿರುವಂತೆ ಸನ್ನೆ ಮಾಡಿದರು.
ಅಧ್ಯಕ್ಷರಾಗಿ ಪದಗ್ರಹಣ ಮಾಡಿದ ಸಿಧು ಕ್ರಿಕೆಟ್ ವೃತ್ತಿ ಜೀವನದ ಬಳಿಕ ರಾಜಕೀಯ ಪ್ರವೇಶ ಮಾಡಿರುವ ಸಿಧು ಅಮೃತಸರ್(ಪೂರ್ವ) ಕ್ಷೇತ್ರದ ಶಾಸಕರಾಗಿ ಆಯ್ಕೆಯಾಗಿದ್ದರು. ಇದಾದ ಬಳಿಕ ಮುಖ್ಯಮಂತ್ರಿ ಅಮರೀಂದರ್ ಸಿಂಗ್ ಹಾಗೂ ಸಿಧು ನಡುವಿನ ಭಿನ್ನಾಭಿಪ್ರಾಯ ಮುಂದುವರೆದಿತ್ತು. ಇದರ ಬೆನ್ನಲ್ಲೇ ಮಧ್ಯೆ ಪ್ರವೇಶ ಮಾಡಿರುವ ಕಾಂಗ್ರೆಸ್ ಹೈಕಮಾಂಡ್ ಬಿಕ್ಕಟ್ಟು ಶಮನ ಮಾಡಿದೆ. ಇಂದು ಪಕ್ಷದ ಅಧ್ಯಕ್ಷರಾಗಿ ಪದಗ್ರಹಣ ಮಾಡಿದ್ದಾರೆ.
ಈ ವೇಳೆ ಮಾತನಾಡಿರುವ ಸಿಧು, ನಾನು ಪಕ್ಷದ ಸಾಮಾನ್ಯ ಕಾರ್ಯಕರ್ತರನಂತೆ ಸೇವೆ ಸಲ್ಲಿಸುತ್ತೇನೆ. ನಿಮ್ಮೊಂದಿಗೆ ಭುಜಕ್ಕೆ ಭುಜ ಕೊಟ್ಟು ಕೆಲಸ ಮಾಡುತ್ತೇನೆ. ನನಗೆ ಯಾವುದೇ ರೀತಿಯ ಅಹಂ ಇಲ್ಲ ಎಂದು ಹೇಳಿದ್ದಾರೆ. ಪಂಜಾಬ್ನಲ್ಲಿ ಮುಂದಿನ ವರ್ಷ ವಿಧಾನಸಭೆ ಚುನಾವಣೆ ನಡೆಯಲಿದ್ದು, ಅದಕ್ಕೂ ಮುಂಚಿತವಾಗಿ ಅಲ್ಲಿ ಉಂಟಾಗಿದ್ದ ಕಾಂಗ್ರೆಸ್ ಬಿಕ್ಕಟ್ಟಿಗೆ ಇದೀಗ ಪೂರ್ಣವಿರಾಮ ಇಡಲಾಗಿದೆ.