ಪಾಟ್ನಾ: ಎನ್‌ಡಿಎ ಶಾಸಕಾಂಗ ಪಕ್ಷದ ಜಂಟಿ ಸಭೆ ನವೆಂಬರ್ 15 ಭಾನುವಾರ ನಡೆಯಲಿದ್ದು, ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆಯಾಗಲಿದ್ದಾರೆ.
ನ.15ಕ್ಕೆ ಬಿಹಾರ ಎನ್‌ಡಿಎ ಸಭೆ: ಶಾಸಕಾಂಗ ಪಕ್ಷದ ನಾಯಕರಾಗಿ ನಿತೀಶ್ ಕುಮಾರ್ ಆಯ್ಕೆ - Formation of Bihar Government
ನವೆಂಬರ್ 15 ಭಾನುವಾರ ಬಿಹಾರ ಎನ್‌ಡಿಎ ಒಕ್ಕೂಟದ ಸಭೆ ಕರೆಯಲಾಗಿದ್ದು, ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ನಡೆಯಲಿದೆ.
ನಿತೀಶ್ ಕುಮಾರ್ ನಿವಾಸದಲ್ಲಿ ಎನ್‌ಡಿಎ ಒಕ್ಕೂಟದ ನಾಲ್ಕು ಪಕ್ಷಗಳಾದ ಜೆಡಿಯು, ಬಿಜೆಪಿ, ಹೆಚ್‌ಎಎಂ ಮತ್ತು ವಿಐಪಿಯ ನಾಯಕರು ಸಭೆ ನಡೆಸಲಿದ್ದಾರೆ. ಮಧ್ಯಾಹ್ನ 12:30ಕ್ಕೆ ಸಭೆ ಪ್ರಾರಂಭವಾಗಲಿದೆ.
ಎನ್‌ಡಿಎ ಒಕ್ಕೂಟದಲ್ಲಿ ಬಿಜೆಪಿ 74 ಸ್ಥಾನಗಳನ್ನು ಪಡೆದು ಅತಿದೊಡ್ಡ ಪಕ್ಷವಾಗಿ ಹೊರಹೊಮ್ಮಿದ್ದು, ಜೆಡಿಯುಗಿಂತ ಹೆಚ್ಚಿನ ಸ್ಥಾನ ಗಳಿಸಿದೆ. ಆದರೂ, ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ, ಕೇಸರಿ ಪಾಳಯದ ನಾಯಕರು ನಿತೀಶ್ ಕುಮಾರ್ ಅವರನ್ನೇ ಮುಖ್ಯಮಂತ್ರಿ ಮಾಡಲು ನಿರ್ಧರಿಸಿದ್ದಾರೆ ಎಂದು ತಿಳಿದು ಬಂದಿದೆ. ಚುನಾವಣೆಗೂ ಮೊದಲೇ ನಿತೀಶ್ ಕುಮಾರ್ ಸಮ್ಮಿಶ್ರ ಸರ್ಕಾರದ ಮುಖ್ಯಮಂತ್ರಿ ಎಂದು ಘೋಷಿಸಲಾಗಿತ್ತು.