ಕರ್ನಾಟಕ

karnataka

ETV Bharat / bharat

20 ದಿನಗಳ ಹಿಂದಷ್ಟೇ ಮದುವೆಯಾಗಿದ್ದ ಯುವತಿ ಆತ್ಮಹತ್ಯೆಗೆ ಶರಣು - ನವವಿವಾಹಿತೆ ದುರಂತ ಸಾವು

ನವವಿವಾಹಿತೆಯೋರ್ವಳು ಅನುಮಾನಾಸ್ಪದ ರೀತಿಯಲ್ಲಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹೈದರಾಬಾದ್​ನ ಎಲ್​ಬಿ ನಗರದಲ್ಲಿ ನಡೆದಿದ್ದು, ಪ್ರಕರಣ ದಾಖಲಾಗಿದೆ.

NEWLY MARRIED BRIDE
NEWLY MARRIED BRIDE

By

Published : Nov 18, 2021, 7:12 PM IST

ಹೈದರಾಬಾದ್​​(ತೆಲಂಗಾಣ): ಕಳೆದ 20 ದಿನಗಳ ಹಿಂದೆ ತಾನು ಪ್ರೀತಿಸುತ್ತಿದ್ದ ಯುವಕನೊಂದಿಗೆ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದ ನವವಿವಾಹಿತೆ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾಳೆ. ಪತಿಯೇ ಆಕೆಯ ಕೊಲೆ ಮಾಡಿರುವ ಗಂಭೀರ ಆರೋಪ ಕೇಳಿ ಬಂದಿದೆ.

ಹೈದರಾಬಾದ್​ನ ಎಲ್​.ಬಿ.ನಗರ (Hyderabad L.B.Nagar) ಪೊಲೀಸ್ ಠಾಣಾ ವ್ಯಾಪ್ತಿಯ ಹಸ್ತಿನಾಪುರದಲ್ಲಿ ಈ ದುರ್ಘಟನೆ ನಡೆದಿದೆ. ಕಳೆದ 20 ದಿನಗಳ ಹಿಂದೆ ಮದುವೆಯಾಗಿದ್ದ ಅಮೂಲ್ಯಶ್ರೀ (22) ಸಾವನ್ನಪ್ಪಿದ್ದಾರೆ. ಕಳೆದ ಕೆಲ ವರ್ಷಗಳಿಂದ ಪ್ರೀತಿಸುತ್ತಿದ್ದ ಡೇವಿಡ್​ ಎಂಬ ವ್ಯಕ್ತಿಯೊಂದಿಗೆ ಅಮೂಲ್ಯಶ್ರೀ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದರು.

ಇದನ್ನೂ ಓದಿ:ಟೀಂ ಇಂಡಿಯಾ ಕೋಚ್‌ ಹುದ್ದೆಗೆ ನನಗೂ ಆಫರ್ ಬಂದಿತ್ತು: ರಿಕಿ ಪಾಂಟಿಂಗ್‌

ತಮ್ಮ ಮಗಳ ಸಾವಿಗೆ ಗಂಡನ ಮನೆಯವರೇ ಕಾರಣ ಎಂದು ಮೃತ ಅಮೂಲ್ಯ ಕುಟುಂಬಸ್ಥರು ಶಂಕೆ ವ್ಯಕ್ತಪಡಿಸಿದ್ದಾರೆ. ಜೊತೆಗೆ, ಪತಿಯೇ ಆಕೆಯನ್ನು ಕೊಲೆ ಮಾಡಿದ್ದಾನೆಂದು ಗಂಭೀರ ಆರೋಪ ಸಹ ಮಾಡಲಾಗಿದೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆ ಎದುರು ಪ್ರತಿಭಟನೆ ನಡೆಸಲಾಯಿತು. ಈ ವೇಳೆ ಮಾಜಿ ಎಂಎಲ್​​ಸಿ ರಾಮುಲು ನಾಯಕ್​​ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿ, ಸಂತ್ರಸ್ತರಿಗೆ ಸಾಥ್​ ನೀಡಿದರು.

ಗುಂಟೂರಿನಲ್ಲೂ ಪ್ರಕರಣ ದಾಖಲು:

ಮದುವೆಯಾದ ಕೇವಲ 16 ದಿನಕ್ಕೆ ನವವಿವಾಹಿತೆ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಆಂಧ್ರಪ್ರದೇಶದ ಗುಂಟೂರು ಜಿಲ್ಲೆಯಲ್ಲಿ ನಡೆದಿದ್ದು, 19 ವರ್ಷದ ಚೈತನ್ಯ ಸಾವನ್ನಪ್ಪಿದ್ದಾಳೆ. ಗಂಡನ ಮನೆಯವರು ನೀಡುತ್ತಿದ್ದ ವರದಕ್ಷಿಣೆ ಕಿರುಕುಳದಿಂದ ಸಾವನ್ನಪ್ಪಿದ್ದಾಳೆಂಬ ಆರೋಪ ಕೇಳಿ ಬಂದಿದೆ.

ABOUT THE AUTHOR

...view details