ಹಥ್ರಾಸ್:ದೇಶದಲ್ಲೇ ಸಂಚಲನ ಮೂಡಿಸಿದ ಹಥ್ರಾಸ್ ಸಾಮೂಹಿಕ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಸ್ಥಳೀಯ ಎಸ್ಸಿ/ಎಸ್ಟಿ ವಿಶೇಷ ನ್ಯಾಯಾಲಯ ವಿಚಾರಣೆ ಕೈಗೊಂಡಿತು.
ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದಲ್ಲಿ ಸ್ಥಳೀಯ ವಿಶೇಷ ನ್ಯಾಯಾಲಯದಲ್ಲಿ ಶುಕ್ರವಾರ ವಿಚಾರಣೆ ನಡೆಯಿತು. ಶುಕ್ರವಾರ, ನ್ಯಾಯಾಲಯವು ಜಿಲ್ಲಾ ಆಸ್ಪತ್ರೆಯ ವೈದ್ಯರು ಮತ್ತು ಚಂದಪಾ ಪೊಲೀಸ್ ಠಾಣೆಯ ಮಹಿಳಾ ಕಾನ್‌ಸ್ಟೇಬಲ್ ಅವರ ಹೇಳಿಕೆಗಳನ್ನು ದಾಖಲಿಸಿದೆ. ಈ ಪ್ರಕರಣದ ಮುಂದಿನ ವಿಚಾರಣೆಗೆ ಮಾರ್ಚ್ 24 ರ ದಿನಾಂಕ ನಿಗದಿಪಡಿಸಲಾಗಿದೆ.
ಶುಕ್ರವಾರ ನಡೆದ ವಿಚಾರಣೆಯಲ್ಲಿ ಜಿಲ್ಲಾ ಆಸ್ಪತ್ರೆಯ ವೈದ್ಯ ಡಾ.ರಮೇಶ್ ಬಾಬು ಮತ್ತು ಚಂದಪಾ ಪೊಲೀಸ್ ಠಾಣೆಯ ಮಹಿಳಾ ಕಾನ್‌ಸ್ಟೇಬಲ್ ಕು. ರಶ್ಮಿಯ ಹೇಳಿಕೆಗಳನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗಿದೆ.
ಬಾಲಕಿಯ ಸಹೋದರ ಇಂದು ನ್ಯಾಯಾಲಯಕ್ಕೆ ಬರಲು ಸಾಧ್ಯವಾಗಿಲ್ಲವೆಂದು ಸಂತ್ರಸ್ತ ಪಕ್ಷದ ವಕೀಲ ಭಗೀರಥ್ ಸಿಂಗ್ ಸೋಲಂಕಿ ವಿಶೇಷ ನ್ಯಾಯಾಲಯಕ್ಕೆ ತಿಳಿಸಿದರು.
ವಿಚಾರಣೆ ದಾಖಲಿಸಿಕೊಂಡ ನ್ಯಾಯಾಲಯ ಪ್ರಕರಣದ ಮುಂದಿನ ವಿಚಾರಣೆಯನ್ನು ಮಾರ್ಚ್ 24ಕ್ಕೆ ಮುಂದೂಡಿತು. ಬುಧವಾರದಂದು ಸಂತ್ರಸ್ತ ಸಹೋದರ ಮತ್ತು ಆಕೆಯ ತಾಯಿಯ ಹೇಳಿಕೆಗಳನ್ನು ನ್ಯಾಯಾಲಯದಲ್ಲಿ ದಾಖಲಿಸಲಾಗುತ್ತದೆ.
ಸೆಪ್ಟೆಂಬರ್ 14, 2020 ರಂದು, ಹಥ್ರಾಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿತ್ತು. ಬಳಿಕ ಆಕೆ ಸೆಪ್ಟೆಂಬರ್ 29 ರಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಳು. ಈ ಘಟನೆ ದೇಶದಲ್ಲಿ ಸಂಚಲನ ಮೂಡಿಸಿತ್ತು. ಈ ಘಟನೆ ಕುರಿತು ನಾಲ್ವರು ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದ್ದು, ಪ್ರಕರಣದ ತೀರ್ಪು ಹೊರ ಬರಬೇಕಾಗಿದೆ.