ನವದೆಹಲಿ: ದೇಶದ 11 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಹಿಳೆಯರು ಪುರುಷರಿಗಿಂತ ಹೆಚ್ಚು ಸರಾಸರಿ ಲೈಂಗಿಕ ಪಾಲುದಾರರನ್ನು ಹೊಂದಿದ್ದಾರೆ. ಹೀಗೆ ತಮ್ಮ ಸಂಗಾತಿ ಅಲ್ಲದ ಅಥವಾ ತಮ್ಮೊಂದಿಗೆ ವಾಸಿಸದ ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ ಮಹಿಳೆಯರ ಪ್ರಮಾಣ ಶೇ 4ರಷ್ಟಿದೆ. ಅದರಂತೆ ಇದೇ ರೀತಿಯ ಪುರುಷರ ಪ್ರಮಾಣ ಕೇವಲ ಶೇ 0.5 ಮಾತ್ರ ಎಂದು ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆ (NFHS) ವರದಿ ಹೇಳಿದೆ.
1.1 ಲಕ್ಷ ಮಹಿಳೆಯರು ಮತ್ತು 1 ಲಕ್ಷ ಪುರುಷರನ್ನೊಳಗೊಂಡು ನಡೆಸಲಾದ ರಾಷ್ಟ್ರೀಯ ಕುಟುಂಬ ಆರೋಗ್ಯ ಸಮೀಕ್ಷೆಯ ಪ್ರಕಾರ, ಬಹಳಷ್ಟು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಹಿಳೆಯರ ಲೈಂಗಿಕ ಪಾಲುದಾರರ ಸಂಖ್ಯೆ ಪುರುಷರಿಗಿಂತ ಹೆಚ್ಚಾಗಿದೆ. ಈ ರಾಜ್ಯಗಳೆಂದರೆ ರಾಜಸ್ಥಾನ, ಹರಿಯಾಣ, ಚಂಡೀಗಢ, ಜಮ್ಮು ಮತ್ತು ಕಾಶ್ಮೀರ, ಲಡಾಖ್, ಮಧ್ಯ ಪ್ರದೇಶ, ಅಸ್ಸಾಂ, ಕೇರಳ, ಲಕ್ಷದ್ವೀಪ, ಪುದುಚೇರಿ ಮತ್ತು ತಮಿಳುನಾಡು.