ಚಂಡೀಗಢ:ಪಂಜಾಬ್‌ನಲ್ಲಿ ಘನ ಮತ್ತು ದ್ರವ ತ್ಯಾಜ್ಯ ನಿರ್ವಹಣಾ ವ್ಯವಸ್ಥೆಯನ್ನು ಸರಿಯಾದ ರೀತಿಯಲ್ಲಿ ಜಾರಿಗೊಳಿಸದ ಹಿನ್ನೆಲೆ ಎನ್‌ಜಿಟಿ ಮಹತ್ವದ ಕ್ರಮವೊಂದನ್ನು ಕೈಗೊಂಡಿದೆ. ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಪಂಜಾಬ್ ಸರ್ಕಾರಕ್ಕೆ ದೊಡ್ಡ ಹೊಡೆತ ನೀಡಿದ್ದು, ಸುಮಾರು 2000 ಕೋಟಿ ದಂಡ ವಿಧಿಸಿದೆ.
ಘನ ಮತ್ತು ದ್ರವ ತ್ಯಾಜ್ಯವನ್ನು ಸರಿಯಾಗಿ ನಿರ್ವಹಣೆ ಮಾಡದ ಹಿನ್ನೆಲೆ ದಂಡ ವಿಧಿಸಲಾಗಿದೆ. ಎನ್‌ಜಿಟಿ ಅಧ್ಯಕ್ಷ ನ್ಯಾಯಮೂರ್ತಿ ಆದರ್ಶ ಕುಮಾರ್ ಗೋಯಲ್ ನೇತೃತ್ವದ ಪೀಠ ಈ ಆದೇಶ ನೀಡಿದೆ. ಈ ವಿಷಯದಲ್ಲಿ ಎನ್‌ಜಿಟಿ ಪದೇ ಪದೇ ಆದೇಶ ನೀಡಿದ್ರೂ, ಪಂಜಾಬ್ ಸರ್ಕಾರ ಇದಕ್ಕೆ ಸಂಬಂಧಿಸಿದಂತೆ ಯಾವುದೇ ಕ್ರಮವನ್ನು ಕೈಗೊಂಡಿರಲಿಲ್ಲ ಎಂದು ಎನ್‌ಜಿಟಿ ತಿಳಿಸಿದೆ.