ನವದೆಹಲಿ: ಕೊರೊನಾದಿಂದ ಕಾರ್ಮಿಕರು ಮತ್ತು ವಲಸೆ ಕಾರ್ಮಿಕರು ಎದುರಿಸುತ್ತಿರುವ ದುಷ್ಪರಿಣಾಮದ ಬಗ್ಗೆ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗವು ವಿವಿಧ ಸಚಿವಾಲಯಗಳು ಮತ್ತು ರಾಜ್ಯಗಳಿಗೆ ಹೆಚ್ಚಿನ ಸಲಹೆಗಳನ್ನು ನೀಡಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
"ಸಮಾಜದ ವಿವಿಧ ವರ್ಗಗಳ ಮೇಲೆ ಸಾಂಕ್ರಾಮಿಕ ರೋಗದ ದುಷ್ಪರಿಣಾಮಗಳನ್ನು ಗಮನದಲ್ಲಿಟ್ಟುಕೊಂಡು ಎನ್‌ಎಚ್‌ಆರ್‌ಸಿ 2.0 ಸಿರೀಸ್ ಕೋವಿಡ್ -19 ಸಾಂಕ್ರಾಮಿಕ ಸಲಹೆಗಳ ಪಟ್ಟಿಯನ್ನು ರಾಜ್ಯ ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ನೀಡಿದೆ" ಎಂದು ಎನ್‌ಹೆಚ್‌ಆರ್‌ಸಿ ತಿಳಿಸಿದೆ.
ಈ ಸಲಹೆಗಳಲ್ಲಿ “ಕಾರ್ಮಿಕರನ್ನು ಗುರುತಿಸುವುದು, ಅವರಿಗೆ ಪುನರ್ವಸತಿ ಕಲ್ಪಿಸುವುದು ಮತ್ತು ಕೊರೊನಾ ಸಮಯದಲ್ಲಿ ಅನೌಪಚಾರಿಕ ಕಾರ್ಮಿಕರ ಹಕ್ಕುಗಳನ್ನು ಕಾಪಾಡುವುದು” ಎಂಬ ಮೂರು ಪ್ರಮುಖ ಅಂಶವನ್ನು ತಿಳಿಸಲಾಗಿದೆ.